ಬೋಟ್ ಮುಳುಗಿ ಲಕ್ಷಾಂತರ ಹಾನಿ
Boat sinks, causing millions in damage
ಲೋಕದರ್ಶನ ವರದಿ
ಬೋಟ್ ಮುಳುಗಿ ಲಕ್ಷಾಂತರ ಹಾನಿ
ಕಾರವಾರ 09: ಅಂಕೋಲಾ ತಾಲೂಕಿನ ಬೇಲೇಕೇರಿ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಶಾರದಾಂಬ ಹೆಸರಿನ ಪರ್ಸಿನ್ ಮೀನುಗಾರಿಕಾ ಬೋಟ್ ಗುರುವಾರ ಬೆಳಗಿನ ಜಾವ ಅಲೆಗಳ ತೀವ್ರತೆಗೆ ಮುಳುಗಡೆಯಾಗಿರುವ ಘಟನೆ ಸಂಭವಿಸಿದೆ.
ಸರಸ್ವತಿ ಅಶೋಕ ಬಾನಾವಳಿಕರ ಅವರ ಅಧೀನದಲ್ಲಿದ್ದ ಈ ಬೋಟ್ ಸಮುದ್ರದ ಅಲೆಗಳ ಅಬ್ಬರಕ್ಕೆ ಮುಳುಗಿ, ಒಳಗೆ ನೀರು ತುಂಬಿ ಮುಳುಗಡೆಯಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ. ಬೋಟ್‌ನ ಎಂಜಿನ್, ಬಲೆಗಳು ಹಾಗೂ ಇತರ ಉಪಕರಣಗಳು ಹಾನಿಯಾಗಿವೆ. ಬೇಲೇಕೇರಿ ಗ್ರಾಮದ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದು ಬಂದರಿನಲ್ಲಿ ಅಲೆ ತಡೆಗೋಡೆ (ಬ್ರೇಕ್‌ವಾಟರ್) ಸೌಲಭ್ಯ ಇಲ್ಲದ ಕಾರಣ ಇಂತಹ ಘಟನೆಗಳು ಆಗಾಗ ನಡೆಯುತ್ತಿವೆ. ಭಾರೀ ಗಾತ್ರದ ಅಲೆಗಳಿಂದ ಬಂದರಿನಲ್ಲಿ ನಿಲ್ಲಿಸಿದ ಬೋಟ್‌ಗಳಿಗೂ ಅಪಾಯ ಉಂಟಾಗುತ್ತಿದೆ. ಹೀಗಾಗಿ ಅಲೆ ತಡೆಗೋಡೆ ನಿರ್ಮಿಸಲು ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 