ಬಾಲಿವುಡ್ ಹಿರಿಯ ನಟ ಅಸಿಫ್ ಬಾಸ್ರಾ ಆತ್ಮಹತ್ಯೆ
ಮುಂಬೈ, 12: ಬಾಲಿವುಡ್ ಹಿರಿಯ ನಟ ಆಸಿಫ್ ಬಾಸ್ರಾ (53) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಆಸಿಫ್ ಬಾಸ್ರಾ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧರ್ಮಶಾಲಾ ಕೆಫೆ ಬಳಿ ಆಸಿಫ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಅತಿಥಿಗೃಹವೊಂದರಲ್ಲಿ ಅವರು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು, ವಿಧಿ ವಿಜ್ಞಾನ ತಂಡ ತನಿಖೆ ಆರಂಭಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವಿಮುಕ್ತ್ ರಂಜನ್ ತಿಳಿಸಿದ್ದಾರೆ.