ವೀರಶೈವ-ಲಿಂಗಾಯತ ಎರಡೂ ಒಂದೇ : ಶ್ರೀ ರಂಭಾಪುರಿ ಜಗದ್ಗುರುಗಳು
ಚಿಕ್ಕಮಗಳೂರು ಅಕ್ಟೋಬರ್-29: ಇಷ್ಟಲಿಂಗಾರ್ಚನೆಯ ಮೂಲಕ ಜೀವನ್ಮುಕ್ತಿ ಹೊಂದುವುದೇ ವೀರಶೈವ ಧರ್ಮದ ಮೂಲ ಗುರಿ ಎಂದು ಬಾಳೆಹೊನ್ನೂರಿನ ಶ್ರೀಮದ್ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರು ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿಕ್ಕಮಗಳೂರು ಜಿಲ್ಲಾ ಘಟಕ ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡುತ್ತಿದ್ದರು.
ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಆಗಿದ್ದು ಈ ಬಗ್ಗೆ ಸಾಕಷ್ಟು ವಾದ ವಿವಾದಗಳಾಗಿದ್ದು ಇತಿಹಾಸ. ಎಲ್ಲ ಉಪಪಂಗಡಗಳೂ ಒಗ್ಗಟ್ಟಿನಿಂದ ಮುನ್ನಡೆದರೆ ಜನಾಂಗಕ್ಕೆ ಶ್ರೇಯಸ್ಸಿದೆ. ಧಮರ್ಾಚರಣೆಯನ್ನು ಶ್ರದ್ಧಾ ಭಕ್ತಿಗಳಿಂದ ನೆರವೇರಿಸುವ ಅನಿವಾರ್ಯತೆ ಇದೆ. ಉತ್ಕೃಷ್ಟವಾದ ಸತ್ವ ಸಾರವನ್ನು ಒಳಗೊಂಡ ವೀರಶೈವ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮಹತ್ವದ ಪಾತ್ರವನ್ನು ವಹಿಸುತ್ತಿದೆ. ಎಲ್ಲರೂ ಈ ನಿಟ್ಟಿನಲ್ಲಿ ಸಹಕಾರ ನೀಡಬೇಕೆಂದು ಜಗದ್ಗುರುಗಳು ತಿಳಿಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿ ಮಹಾ ಪ್ರಧಾನ ಕಾರ್ಯದಶರ್ಿ ಮಾಜಿ ಸಚಿವ ಈಶ್ವರ ಖಂಡ್ರೆ ಹಾಗೂ ಕಾರ್ಯದಶರ್ಿ ಎಚ್.ಎಂ. ರೇಣುಕಾ ಪ್ರಸನ್ನ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯರು, ಬೀರೂರು ಖಾಸಾ ಶಾಖಾ ಮಠಾಧ್ಯಕ್ಷ ರುದ್ರಮುನಿ ಶಿವಾಚಾರ್ಯರು, ಬೇರುಗಂಡಿ ಮಠಾಧ್ಯಕ್ಷ ರೇಣುಕ ಮಹಾಂತ ಶಿವಾಚಾರ್ಯರು ಉಪದೇಶ ನೀಡಿದರು.
ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಲೋಕೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮುದಾಯದ ಸಾಧಕರನ್ನು ಸನ್ಮಾನಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಪದಾಧಿಕಾರಿಗಳಾದ ಎಚ್.ವಿ.ಗಿರೀಶ್, ಪಿ.ವಿ.ಉಮಾ, ಎಚ್.ಸಿ.ರೇವಣಸಿದ್ದಪ್ಪ, ಮುಂಡ್ರೆ ಗಿರಿರಾಜ್, ಪಂಕಜಾ ಮಲ್ಲಿಕಾಜರ್ುನ್, ದೃವಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.