ಬಸ್-ಲಾರಿ ಮಧ್ಯೆ ಡಿಕ್ಕಿ: ಬಾಲಕ ಸಾವು
Boy dies in bus-lorry collision
ದೇವರಹಿಪ್ಪರಗಿ 04: ಪಟ್ಟಣದ ಸಮೀಪದ ರಾಜಸ್ಥಾನ ಡಾಬಾ ಬಳಿ ಶುಕ್ರವಾರ ರಾತ್ರಿ ಕಲ್ಯಾಣ ಕರ್ನಾಟಕ ಸಾರಿಗೆಯ ಬಸ್(ವಿಜಯಪುರ ಡಿಪೋ-2) ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ.
ಈ ಅಪಘಾತದಲ್ಲಿ ಸಿಂದಗಿ ತಾಲೂಕಿನ ಬಳಗಾನೂರ ಗ್ರಾಮದ ಕೇದಾರಲಿಂಗ ಪರಶುರಾಮ ಮಾಲ್ದ(06)ಬಾಲಕ ಶನಿವಾರದಂದು ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಸುಮಾರು 20-30 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಅಂಬ್ಯುಲೆನ್ಸ್, ಖಾಸಗಿ ಹಾಗೂ ಸರ್ಕಾರಿ ಬಸ್ ಮೂಲಕ ವಿಜಯಪುರ, ದೇವರಹಿಪ್ಪರಗಿ ಹಾಗೂ ಸಿಂದಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಜಯಪುರ ಡಿಪೋ-2ಸೇರಿದ ಬಸ್ ಹಾಗೂ ಲಾರಿ ವಿಜಯಪುರದಿಂದ ಸಿಂದಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿ ಚಾಲಕ ಯಾವುದೇ ಮುನ್ಸೂಚನೆ ನೀಡದೆ ಡಾಬಾ ಕಡೆ ಟರ್ನ್ ಮಾಡಿದ ಕಾರಣ ಬಸ್ ನಿಯಂತ್ರಣ ಲಾರಿಗೆ ಡಿಕ್ಕಿ ಹೊಡೆದು ಪರಿಣಾಮ ನಡೆದ ಘಟನೆ ಹಾಗೂ ದಾಖಲಿಸಲಾಗಿದೆ.ಘಟನೆಯಲ್ಲಿ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಬಾಲಕನ ತಂದೆ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ದೇವರಹಿಪ್ಪರಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 