ಬಾಲಕ ನಾಪತ್ತೆ: ಪತ್ತೆಗೆ ಮನವಿ
Boy missing: Appeal to find him
ಲೋಕದರ್ಶನ ವರದಿ
ಬಾಲಕ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ 18: ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆಯ 01ನೇ ವಾರ್ಡ್‌ನ ನಿವಾಸಿ ಯಮನೂರ್ಪ ಎನ್ನುವ 15 ವರ್ಷದ ಬಾಲಕ ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋದವನು ಮನೆಗೆ ಬಾರದೇ ಫೆ.17 ರಂದು ಕಾಣೆಯಾಗಿದ್ದು, ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್‌ಪೆಕ್ಟರ್ ಆಫ್ ಪೊಲೀಸ್ ಮನವಿ ಮಾಡಿದ್ದಾರೆ. ಚಹರೆ: ಎತ್ತರ 5.1 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ತಿಳಿ ನೀಲಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಅಂಗಿ ಧರಿಸಿರುತ್ತಾನೆ. ಕಾಣೆಯಾದ ಬಾಲಕನ ಬಗ್ಗೆ ಮಾಹಿತಿ ದೊರೆತಲ್ಲಿ ತೆಕ್ಕಲಕೋಟೆ ಪೊಲೀಸ್ ಠಾಣೆಯ ಪಿಎಸ್‌ಐ ದೂ.08396-248013, ಮೊ.9480803055, ಸಿಪಿಐ ದೂ.08396-248044, ಬಳ್ಳಾರಿ ಗ್ರಾಮೀಣ ಉಪವಿಭಾಗ ಡಿಎಸ್‌ಪಿ ದೂ.08392-276000, ಬಳ್ಳಾರಿ ಎಸ್‌ಪಿ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 