ಬಳ್ಳಾರಿ

ಆ.20 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ

ಆ.20 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ

ಬಳ್ಳಾರಿ 14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಲ್ಲಿ ಏರಿ​‍್ಡಸಲಾಗಿದೆ. 

ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜಡ್ ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. 

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. 

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್‌.ಆಂಜನೇಯಲು, ಜಿಲ್ಲಾ ಆರ್ಯ ಈಡಿಗ ಗೌನ ಮಹಾಜನ ಸಭಾ ಜಿಲ್ಲಾಧ್ಯಕ್ಷ ಹೆಚ್‌.ಆರ್ ಶ್ರೀನಾಥ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 

ಬಳ್ಳಾರಿಯ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಭಾಷ ಅವರು ಜಯಂತಿಯ ಕುರಿತಾಗಿ ವಿಶೇಷ ಉಪನ್ಯಾಸ ನೀಡುವರು. 

ಬಳ್ಳಾರಿಯ ಕು.ಸಾಯಿಶೃತಿ ಅವರಿಂದ ವಚನ ಸಂಗೀತ ಕಾರ್ಯಕ್ರಮ ಇರಲಿದೆ. 

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್‌.ಝುಬೇರ್ ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. 


ಸುದ್ದಿ ಓದಿ