ಕೊರೊನಾಕ್ಕೆ ಬ್ರೆಜಿಲ್ ತತ್ತರ, ಒಂದೇ ದಿನ 15,800 ಪ್ರಕರಣ
ಮಾಸ್ಕೊ, ಮೇ 25,ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ 15,800 ಕೊರೊನಾ ಪ್ರಕರಣ ದಾಖಲಾಗಿದ್ದು, ಒಟ್ಟು ಪೀಡಿತರ ಸಂಖ್ಯೆ 3,63,000ಕ್ಕೆ ಏರಿಕೆ ಆಗಿದೆ. ಅಮೆರಿಕಾ ದೇಶದ ಜನರ ಆರೋಗ್ಯ ರಕ್ಷಣೆ ಉದ್ದೇಶದಿಂದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕಠಿಣ ನಿರ್ಧಾರ ಕೈಗೊಂಡಿದ್ದು, ಬ್ರೆಜಿಲ್ ನಲ್ಲಿ 14 ದಿನಗಳಿಗಿಂತ ಹೆಚ್ಚುದಿನಗಳ ಕಾಲ ತಂಗಿರುವ ಜನರು ಅಮೆರಿಕಾ ಪ್ರವೇಶಿಸುವುದನ್ನು ನಿರ್ಬಂಧಿಸಿ ಆದೇಶಹೊರಡಿಸಿದ್ದಾರೆ ಎಂದು ಶ್ವೇತ ಭವನ ಹೇಳಿಕೆಯಲ್ಲಿ ತಿಳಿಸಿದೆ. ವಿಶ್ವದಲ್ಲೇ ಅತಿ ಹೆಚ್ಚು ಪೀಡಿತರನ್ನು ಹೊಂದಿರುವ ಎರಡನೇ ದೇಶ ಬ್ರೇಜಿಲ್ ಆಗಿದೆ. ಕಳೆದ ಒಂದು ವಾರದಲ್ಲಿ ಬ್ರೆಜಿಲ್ ನಲ್ಲಿ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಮೃತರ ಸಂಖ್ಯೆ 22,716 ಸಂಖ್ಯೆ ಆಗಿದೆ. ಶುಕ್ರವಾರ ವಿಶ್ವ ಆರೋಗ್ಯ ಸಂಸ್ಥೆ ದಕ್ಷಿಣ ಅಮೆರಿಕ ದೇಶವನ್ನು ಕೊರೊನಾ ವೈರಸ್ ನ ನೂತನ ಕೇಂದ್ರ ಎಂದು ಘೋಷಿಸಿತ್ತು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 