ಬ್ರೆಜಿಲ್ ಪ್ರವಾಹ : ಸಂಖ್ಯೆ 37 ಕ್ಕೆ ಏರಿಕೆ
ರಿಯೊ ಡಿ ಜನೈರೊ, ಜ 27 (ಕ್ಸಿನ್ಹುವಾ) ಆಗ್ನೇಯ ಬ್ರೆಜಿಲ್ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಮೃತರ ಸಂಖ್ಯೆ 37 ಕ್ಕೆ ಏರಿಕೆಯಾಗಿದೆ ಎಂದು ನಾಗರಿಕ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.ರಾಜಧಾನಿ ಬೆಲೊ ಹೊರಿಜಾಂಟೆ ಮತ್ತು ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದ್ದು, 21 ಜನರು ಕಾಣೆಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
12 ಮಂದಿ ಗಾಯಗೊಂಡಿದ್ದು , 13,687 ಜನರನ್ನು ಸ್ಥಳಾಂತರಿಸಲಾಗಿದೆ. 3,354 ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಶುಕ್ರವಾರ ಕೇವಲ 24 ಗಂಟೆಗಳಲ್ಲಿ 171.8 ಮಿಲಿಮೀಟರ್ಗಳಷ್ಟು ದಾಖಲೆಯ ಮಳೆಯಾಗಿದೆ, ಇದು 110 ವರ್ಷಗಳಲ್ಲಿ ಈ ಪ್ರದೇಶದಲ್ಲಾದ ಅತಿ ಹೆಚ್ಚು ಮಳೆಯಾಗಿದೆ ಎಂದು ಬ್ರೆಜಿಲ್ನ ರಾಷ್ಟ್ರೀಯ ಹವಾಮಾನ ಸಂಸ್ಥೆ ತಿಳಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 