ವೇಣುಧ್ವನಿ 90.4 ಎಫ್ಎಂನಿಂದ ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 16 : ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಸಮುದಾಯ ಬಾನುಲಿ ಕೇಂದ್ರ ಬೆಳಗಾವಿ, ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶುಕ್ರವಾರ 16ೆ ಆಕ್ಟೋಬರ್ 2026 ರಂದು ಬೆಳಗ್ಗೆ 10 ರಿಂದ 11 ಗಂಟೆ ವರೆಗೆ ನಡೆದ ಕಾರ್ಯಕ್ರಮದಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆ ಅಂಗವಾಗಿ ಪ್ರಶ್ನೋತ್ತರ ಜಾಗೃತಿ ಮೂಡಿಸಲಾಹಿತು.
ಕಾರ್ಯಕ್ರಮದಲ್ಲಿ ಕೆಎಲ್ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಮತ್ತು ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆಯ ತಜ್ಞ ವೈದ್ಯ ಡಾ. ಕುಮಾರ ವಿಂಚುರಕರ್ ಅವರು ಭಾಗವಹಿಸಿ ಸ್ತನ ಕ್ಯಾನ್ಸರ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು.
ಪ್ರತಿ ವರ್ಷ ಅಕ್ಟೋಬರ್ 1 ರಿಂದ ಅಕ್ಟೋಬರ್ 31ರ ವರೆಗೆ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆ ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಮಹಿಳೆಯರು ಸ್ತನ ಕ್ಯಾನ್ಸರ್ಗೆ ಒಳಗಾಗುತ್ತಿದ್ದಾರೆ, ಸ್ತನ ಕ್ಯಾನ್ಸರ್ ಎನ್ನುವುದು ಸ್ತನಗಳ ಜೀವಕೋಶಗಳಲ್ಲಿ ರೂಪುಗೊಳ್ಳುವ ಕ್ಯಾನ್ಸರ್ ಆಗಿದೆ ಸ್ತನ ಕ್ಯಾನ್ಸರ್ ಬರದ ಹಾಗೆ ಮಹಿಳೆಯರು ತಮ್ಮ ಜೀವನ ಶೈಲಿ ಹೇಗಿಟ್ಟುಕೊಳ್ಳುಬೇಕು ಎಂಬುದರ ಕುರಿತು ತಿಳಿಸಿದರು.