ಚಿಕ್ಕೋಡಿ ಇಂಗಡಿ- ಜಲಾಲಪುರ ಮಧ್ಯೆ ಬ್ರಿಡ್ಜ್
Bridge between Chikkodi Ingadi- Jalalpur
ಚಿಕ್ಕೋಡಿ 19: ಚಿಕ್ಕೋಡಿ ತಾಲೂಕಿನ (ಹಳೆ ದಿಗ್ಗೇವಾಡಿ) ಗ್ರಾಮಗಳ ಮಧ್ಯೆ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಪೂರ್ಣಗೊಳಿಸಲು ಹೆಚ್ಚುವರಿಯಾಗಿ ಅಗತ್ಯವಿರುವ ?37 ಕೋಟಿ ಅನುದಾನ ಮಂಜೂರು ಮಾಡುವಂತೆ ಹಾಗೂ ಚಿಕ್ಕೋಡಿ ವಿಭಾಗ ಮಟ್ಟದಲ್ಲಿ ಕ್ಯಾನ್ಸರ್ ಆಸ್ಪತ್ರೆ ಶಾಖೆ ಆರಂಭಿಸಲು 2026ಹಿ27್ಫೂ ಸಾಲಿನ ಆಯವ್ಯದಲ್ಲಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.ಈ ಯೋಜನೆ ಪೂರ್ಣಗೊಂಡಲ್ಲಿ ಇಂಗಳಿ, ಮಾಂಜರಿ, ಅಂಕಲಿ, ಯಡುರ ಸೇರಿದಂತೆ ರಾಯಬಾಗ ತಾಲೂಕಿನ ಜಲಾಲಪೂರ, ದಿಗ್ಗೇವಾಡಿ ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.
ಅಲ್ಲದೆ ರಸ್ತೆ ಸಂಪರ್ಕ ಸುಧಾರಿಸಿ ಕಬ್ಬು ಸಾಗಣೆ ದೂರ ಸುಮಾರು 25 ಕಿ.ಮೀ ಕಡಿಮೆಯಾಗಲಿದೆ ಎಂದು ತಿಳಿಸಲಾಯಿತು.ಚಿಕ್ಕೋಡಿ ವಿಭಾಗದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಿದ್ದು, ರೋಗಿಗಳು ಬೆಳಗಾವಿ, ಹುಬ್ಬಳ್ಳಿ ಹಾಗೂ ಮಹಾರಾಷ್ಟ್ರದ ಕೊಲ್ಹಾಪುರ, ಮೀರಜ ನಗರಗಳಿಗೆ ಚಿಕಿತ್ಸೆಗಾಗಿ ತೆರಳಬೇಕಾಗಿದೆ. ಆರೋಗ್ಯ ಇಲಾಖೆಯ ವರದಿ ಪ್ರಕಾರ ಚಿಕ್ಕೋಡಿ ವಿಭಾಗದಲ್ಲಿ ಒಟ್ಟು 8295 ಕ್ಯಾನ್ಸರ್ ರೋಗಿಗಳಿದ್ದಾರೆ.ಈ ಹಿನ್ನೆಲೆ “ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ” ಕ್ಯಾನ್ಸರ್ ಆಸ್ಪತ್ರೆ ಶಾಖೆಯನ್ನು ಚಿಕ್ಕೋಡಿಯಲ್ಲಿ ಆರಂಭಿಸುವಂತೆ ವಿನಂತಿಸಲಾಯಿತು. ಮುಖ್ಯಮಂತ್ರಿಗಳು ಸಕಾರಾತ್ಮಕ ಪ್ರತಿಕ್ರಿಯೆ ನೀಡಿ, ಅನುದಾನ ಹಾಗೂ ಆಸ್ಪತ್ರೆ ಶಾಖೆಯನ್ನು 2026ಹಿ27್ಫೂ ಆಯವ್ಯದಲ್ಲಿ ಅಳವಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 