ಸರ್ಕಾರಿ-ಖಾಸಗಿ ಕ್ಷೇತ್ರದಲ್ಲಿ ಸ್ಯಾನಿಟರಿ ಇನ್ಸ್ಪೆಕ್ಟರ್ಗಳಿಗೆ ಉಜ್ವಲ ಭವಿಷ್ಯ
Bright future for Sanitary Inspectors in the government and private sectors
ಬೆಳಗಾವಿ, ಜು. 5: ಸ್ವಚ್ಛ ಭಾರತ ಅಭಿಯಾನದ ವ್ಯಾಪಕ ಪರಿಣಾಮದಿಂದ ಸರ್ಕಾರಿ ಕ್ಷೇತ್ರದ ಜೊತೆಗೆ ಖಾಸಗಿ ಸಂಸ್ಥೆಗಳಲ್ಲಿಯೂ ಸ್ಯಾನಿಟರಿ ಇನ್ಸ್ಪೆಕ್ಟರ್ಗಳಿಗೆ ಉದ್ಯೋಗಾವಕಾಶಗಳು ಹೆಚ್ಚಾಗಿವೆ ಎಂದು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನ್ಮೆಂಟ್ ಪ್ರಾದೇಶಿಕ ನಿರ್ದೇಶಕ ಶಿವಕುಮಾರ ಸುರಪುರಮಠ ಹೇಳಿದರು. ನಗರದ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಡೆದ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ಸ್ಯಾನಿಟರಿ ಇನ್ಸ್ಪೆಕ್ಟರ್ ಡಿಪ್ಲೊಮಾ ತರಬೇತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಸ್ವಚ್ಛತೆ ಮತ್ತು ಆರೋಗ್ಯ ಕ್ಷೇತ್ರಕ್ಕೆ ದೇಶಾದ್ಯಂತ ಹೆಚ್ಚಿನ ಆದ್ಯತೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ, ಮಹಾನಗರ ಪಾಲಿಕೆ, ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಸ್ಯಾನಿಟರಿ ಇನ್ಸ್ಪೆಕ್ಟರ್ಗಳಿಗೆ ಉತ್ತಮ ಬೇಡಿಕೆ ಇದೆ. ಅಲ್ಲದೆ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಹೋಟೆಲ್ಗಳು ಹಾಗೂ ವಿವಿಧ ರಾಷ್ಟ್ರೀಯ ಮತ್ತು ಖಾಸಗಿ ಕಂಪನಿಗಳಲ್ಲಿಯೂ ಉದ್ಯೋಗಾವಕಾಶಗಳು ಲಭ್ಯವಿವೆ ಎಂದು ತಿಳಿಸಿದರು. ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳು ಹಾಗೂ ವಿದೇಶಗಳಲ್ಲಿಯೂ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಹಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮು ಎಸ್. ಡಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳ ಮೂಲಕ ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಸ್ಯಾನಿಟರಿ ಇನ್ಸ್ಪೆಕ್ಟರ್ಗಳ ನೇಮಕಾತಿಗೆ ಅವಕಾಶಗಳು ಹೆಚ್ಚುತ್ತಿವೆ ಎಂದು ಹೇಳಿದರು. ಸಮಾಜದಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುತ್ತಿರುವ ಂಋಐಖಉ ಸಂಸ್ಥೆಯ ಶತಮಾನೋತ್ಸವ ಆಚರಣೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 