ಬ್ರಿಟನ್ ರಾಣಿ ಎಲಿಜಬೆತ್ II ಕೋವಿಡ್ ದೃಢ: ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಾರೈಸಿದ ಮೋದಿ
ನವದೆಹಲಿ: ಫೆಬ್ರವರಿ ೨೧: ಬ್ರಿಟನ್ ರಾಣಿ ಎಲಿಜಬೆತ್ II ಅವರಿಗೆ ಕೋವಿಡ್ -19 ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ರಾಣಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
“ಗೌರವಯುತ ರಾಣಿ ಎಲಿಜಬೆತ್ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ರಾಣಿ ಎಲಿಜಬೆತ್ ವೈದ್ಯಕೀಯ ಚಿಕಿತ್ಸೆ ಪಡೆಯುವುದನ್ನು ಮುಂದುವರಿಸಿದ್ದಾರೆ ಮತ್ತು ಎಲ್ಲಾ ಸೂಕ್ತ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆಯ ಹೇಳಿಕೆ ನೀಡಿದೆ.
ವಿಂಡ್ಸರ್ ಕ್ಯಾಸಲ್ ನಿವಾಸದಲ್ಲಿ ಉಳಿದುಕೊಂಡಿರುವ ರಾಣಿ ಮುಂದಿನ ಕೆಲವು ದಿನಗಳಲ್ಲಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವ ನಿರೀಕ್ಷೆಯಿದೆ.