ಸೌಂದತ್ತಿ

ಬಜೆಟ್‌: ವಿಕಸಿತ ಭಾರತದ ನಿರ್ಮಾಣಕ್ಕೆ ಉತ್ತಮ ಅಡಿಪಾಯ

ಬಜೆಟ್‌: ವಿಕಸಿತ ಭಾರತದ ನಿರ್ಮಾಣಕ್ಕೆ ಉತ್ತಮ ಅಡಿಪಾಯ

ಸವದತ್ತಿ 23: ಲೋಕಸಭೆಯಲ್ಲಿ ಇಂದು ಮಂಡಿಸಲಾದ 2024-25ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡುವುದಾಗಿ ಕೇಂದ್ರ ಸಚಿವರು ಘೋಷಣೆ ಮಾಡುವ ಮೂಲಕ ಪ್ರಧಾನಿಯವರ ಸಂಕಲ್ಪದ ವಿಕಸಿತ ಭಾರತದ ನಿರ್ಮಾಣಕ್ಕೆ ಉತ್ತಮ ಅಡಿಪಾಯ ಹಾಕಿದ್ದಾರೆ. 

ದೇಶದ ಅರ್ಥ ವ್ಯವಸ್ಥೆಗೆ ಶರವೇಗ ನೀಡುವ ನಿಟ್ಟಿನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಹಣದುಬ್ಬರವನ್ನು ನಿಯಂತ್ರಿಸಲಿದ್ದು ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ ಮೀಸಲಿರಿಸಿ, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ ಅನುದಾನ ನೀಡುವ ಮೂಲಕ ರೈತರ ಏಳಿಗೆಗೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ. ರೈತರು ಹಾಗೂ ಸ್ತ್ರೀ ಕುಲದ ಬಗೆಗಿನ ಅದಮ್ಯ ವಿಶ್ವಾಸವನ್ನು ಸಂಕೇತಿಸಿದ ಬಜೆಟ್ ಇದಾಗಿದೆಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳು ಹಾಗೂ ಉದ್ಯಮಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡುವ ಮೂಲಕ ಯುವ ಸಮುದಾಯದಕ್ಕೆ ಸ್ವಾವಲಂಬಿ ಹಾಗೂ ಉದ್ಯೋಗ ಸೃಷ್ಟಿಗೆ ಬೃಹತ್ ಪ್ರಮಾಣದಲ್ಲಿ ಉತ್ತೇಜನ ನೀಡಲು ಮನ್ನಣೆ ದೊರಕಿರುವುದು ನಿಜಕ್ಕೂ ಪ್ರಶಂಸನೀಯ ಹೆಜ್ಜೆಯಾಗಿದೆ ಎಂದು ಸವದತ್ತಿ ಬಿಜೆಪಿ ಮುಖಂಡ ವಿರೂಪಾಕ್ಷ ಮಾಮನಿ ಅವರು ತಿಳಿಸಿದ್ದಾರೆ. 


ಸುದ್ದಿ ಓದಿ