ಜನಸಂಖ್ಯೆ ನಿಯಂತ್ರಣದಿಂದ ಸದೃಢ ದೇಶ ನಿರ್ಮಾಣ ಸಾಧ್ಯ:ಹೆಬ್ಬಾರ
ಮುಂಡಗೋಡ:ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಬಹು ವೇಗವಾಗಿ ಬೆಳೆಯುತ್ತಿದೆ ಜನಸಂಖ್ಯೆ ನಿಯಂತ್ರಣ ಮಾಡಿದರೆ ಮಾತ್ರ ಸದೃಢ ದೇಶ ನಿರ್ಮಾಣ ಮಾಡಲು ಸಾಧ್ಯ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಪಟ್ಟಣದ ಲೊಯೋಲ ವಿಕಾಸ ಕೇಂದ್ರದ ಸಭಾಭವನದಲ್ಲಿ ಮಂಗಳವಾರ ಜರುಗಿದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಹಶೀಲ್ದಾರ ಶಂಕರ ಗೌಡಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು. ಲೊಯೋಲ ಸಂಯುಕ್ತ ಪದವಿಪೂರ್ವ ಕಾಲೇಜ್ನ ಉಪನ್ಯಾಸಕಿ ನಾಗರತ್ನಾ ಶೆಟ್ಟಿ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಏರಿ್ಡಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ, ಉತ್ತಮ ಕಾರ್ಯ ನಿರ್ವಹಿಸಿದ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.
ಈ ವೇಳೆ ಟಿಎಪಿಸಿಎಮ್ಎಸ್ ಅಧ್ಯಕ್ಷ ರವಿಗೌಡ ಪಾಟೀಲ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಲ್.ಟಿ.ಪಾಟೀಲ, ಬಿಜೆಪಿ ತಾಲೂಕು ಅಧ್ಯಕ್ಷ ನಾಗಭೂಷಣ ಹಾವಣಗಿ, ಎಲ್ಎಸ್ಎಮ್ಪಿ ಸೊಸೈಟಿ ಅಧ್ಯಕ್ಷ ಉಮೇಶ ಬಿಜಾಪುರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ವೈ.ಪಿ.ಪಾಟೀಲ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಕೆಂಜೋಡಿ ಗಲಬಿ, ಆಡಳಿತ ವೈದ್ಯಾಧಿಕಾರಿ ಎಚ್.ಎಫ್.ಇಂಗಳೆ, ತಾಲೂಕಾ ಆರೋಗ್ಯ ಅಧಿಕಾರಿ ನರೇಂದ್ರ ಪವಾರ, ಡಾ.ಕೌಸರ ಮುಲ್ಲಾ, ಲೊಯೋಲ ವಿಕಾಸ ಕೇಂದ್ರದ ನಿರ್ದೇಶಕ ಫಾ.ಅನಿಲ ಡಿಸೋಜಾ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.