ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ
ಬೆಂಗಳೂರು, ಏ.7, ನಿನ್ನೆ ನಿಧನರಾದ ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಅಂತ್ಯಕ್ರಿಯೆಯನ್ನು ನಗರದ ಹೆಬ್ಬಾಳದ ರುದ್ರಭೂಮಿಯಲ್ಲಿಂದು ನೆರವೇರಿಸಲಾಯಿತು.44 ವರ್ಷದ ಬುಲೆಟ್ ಪ್ರಕಾಶ್ ಲಿವರ್ ಅವರು, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೇ ಸೋಮವಾರ ಮಧ್ಯಾಹ್ನ ನಗರದ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.ತೆರೆದ ವಾಹನದಲ್ಲಿ ಮನೆಯಿಂದ ಹೆಬ್ಬಾಳ ರುದ್ರಭೂಮಿವರೆಗೆ ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ತರಲಾಯಿತು.ತಂದೆಯ ಅಂತಿಮ ಕಾರ್ಯವನ್ನು ಪುತ್ರ ರಕ್ಷಕ್ ನೆರವೇರಿಸಿದ್ದು, ಮಡಿವಾಳ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಲಾಯಿತು.ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್‍ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು, ಆಪ್ತರು ಮಾತ್ರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 