ಯುಪಿಯಲ್ಲಿ ಬಸ್ - ವ್ಯಾನ್ ಡಿಕ್ಕಿ: 5 ಸಾವು
ಮೊರಾದಾಬಾದ್, ಜೂನ್ 28 : ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾನ್ ಬಸ್‌ಗೆ ಡಿಕ್ಕಿ ಹೊಡೆದು ನಂತರ ಉರಳಿಬಿದ್ದ ಕಾರಣ ಕನಿಷ್ಠ 5 ಜನರು ಸಾವನ್ನಪ್ಪಿದ್ದು, ಇತರೆ 17 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಸ್‌ಪಿ ಅಮಿತ್ ಆನಂದ್,ಘಟನೆ ಕುರಿತು , "ದೆಹಲಿ ಮತ್ತು ರಾಂಪುರವನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ ಈ ದುರ್ಘಟನೆ ಜರುಗಿದೆ.
ಈವರೆಗೆ 5 ಜನರ ಸಾವಿನ ವರದಿಯಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು. ಬಸ್ಸು ಕಾರ್ಮಿಕರನ್ನು ಹೊತ್ತ ಪಂಜಾಬ್‌ನಿಂದ ಪಿಲಿಭಿತ್ ಕಡೆಗೆ ಹೋಗುತ್ತಿದ್ದಾಗ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಮೃತ, ಎಲ್ಲ ಕಾರ್ಮಿಕರನ್ನು ಇನ್ನೂ ಗುರುತಿಸಲಾಗಿಲ್ಲ ಎನ್ನಲಾಗಿದೆ.