ಬಳ್ಳಾರಿ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ: ಇಂದಿನಿಂದ ವಿವಿಧೆಡೆ ಬಸ್ ವ್ಯತ್ಯಯ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ: ಇಂದಿನಿಂದ ವಿವಿಧೆಡೆ  ಬಸ್ ವ್ಯತ್ಯಯ

ಬಳ್ಳಾರಿ08: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ರ ಹಿನ್ನಲೆಯಲ್ಲಿ ಚುನಾವಣೆ ಕಾರ್ಯಕ್ಕೆ ಬಳ್ಳಾರಿ ವಿಭಾಗದಿಂದ ಒಟ್ಟು 200 ಬಸ್ಗಳನ್ನು  ಸಾಂದರ್ಭಿಕ ಒಪ್ಪಂದದ ಮೆಲೆ ಒದಗಿಸಲಾಗುತ್ತಿದ್ದು, ಮೇ 09 ಮತ್ತು 10 ರಂದು ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡುತಿನಿ, ಕಂಪ್ಲಿ, ಸಂಡೂರು ಭಾಗಗಳಿಂದ ವಿವಿಧ ಸ್ಥಳಗಳಿಗೆ ತೆರಳುವ ಬಸ್ಗಳ ದೈನಂದಿನ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಕಲ್ಯಾಣ ಕನರ್ಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ.ದೇವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸುದ್ದಿ ಓದಿ