ಸೋಂಪುರ ಗ್ರಾಮಕ್ಕೆ ಬಸ್ ಸಂಚಾರ ಪ್ರಾರಂಭ
ಸಿಂದಗಿ 27; ತಾಲೂಕಿನಲ್ಲಿ ಇನ್ನೂ ಕೆಲವು ಗ್ರಾಮಗಳಿಗೆ ಕೆಲವೊಂದು ಬಸ್ಸಿನ ಸೌಕರ್ಯಗಳಿಲ್ಲ. ಸಿಂದಗಿ ನಗರಕ್ಕೆ ಶಾಲಾ ಕಾಲೇಜಿನ ಸರಿಯಾದ ಸಮಯಕ್ಕೆ ಬಸ್‌ಗಳು ಬರುತ್ತಿಲ್ಲ ಅಂಥವುಗಳನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಮುಂದಾಗುತ್ತೇನೆ ಎಂದು ಶಾಸಕ ಅಶೋಕ್ ಮನಗೂಳಿ ಸ್ಪಷ್ಟನೆ ನೀಡಿದರು.
ತಾಲೂಕಿನ ಸೋಂಪುರ ಗ್ರಾಮದಿಂದ ಸಿಂದಗಿ ಪಟ್ಟಣದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ನೂತನ ಬಸ್ಸಿಗೆ ಮಂಗಳವಾರ ವಿದ್ಯಾರ್ಥಿಗಳಿಂದಲೇ ಚಾಲನೆ ನೀಡಿ ಮಾತನಾಡಿ, ಸೋಂಪುರ ಗ್ರಾಮದಿಂದ ಸಿಂದಗಿ ಪಟ್ಟಣಕ್ಕೆ ನಿತ್ಯ ನೂರಾರು ವಿದ್ಯಾರ್ಥಿಗಳು ಶಿಕ್ಷಣ ಕಲಿಯುವುದಕ್ಕೆ ಬರುತ್ತಲಿದ್ದಾರೆ. ಬಸ್ಸಿನ ಸೌಕರ್ಯವಿಲ್ಲದ ಕಾರಣ ಅನೇಕ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದೆ ಬೀಳುತ್ತಿದ್ದರು. ಇದನ್ನ ಅರ್ಥೈಸಿಕೊಂಡು ಆ ಗ್ರಾಮದ ಯಾವ ಮಕ್ಕಳಿಗೂ ಕಲಿಕೆಗೆ ತೊಂದರೆ ಆಗಬಾರದು ಎಂದು ನಿರ್ಧರಿಸಿ ಅವರ ಬೇಡಿಕೆಯನ್ನು ಪೂರೈಸಲು ಮುಂದಾಗಿದ್ದೇವೆ ಎಂದರು.
ನಮ್ಮ ಕಾಲೇಜು ಬೆಳಗ್ಗೆ 7.45ಕ್ಕೆ ಪ್ರಾರಂಭಗೊಳ್ಳುತ್ತದೆ ಆದರೆ ಬಸ್ಸಿನ ಸೌಕರ್ಯವಿಲ್ಲದಿರುವ ಕಾರಣ ಖಾಸಗಿ ವಾಹನದಲ್ಲಿ ಬರುವ ನಾವುಗಳು ನಿತ್ಯ ಒಂದು ಅವಧಿಯ ತರಗತಿಯನ್ನು ಕಳೆದುಕೊಳ್ಳುತ್ತಿದ್ದೇವೆ. ಇದರಿಂದ ನಮ್ಮ ಶಿಕ್ಷಣಕ್ಕೆ ನಿತ್ಯ ತೊಂದರೆಯಾಗುತ್ತಿತ್ತು. ಪ್ರಸ್ತುತ ನಾವು ನಮ್ಮ ಶಾಲಾ-ಕಾಲೇಜುಗಳ ಸರಿಯಾದ ಸಮಯಕ್ಕೆ ಇಂದು ಹೋಗುವಂತಾಗಿದೆ. ತಾಲೂಕಿನ ಸೋಂಪುರ ಗ್ರಾಮದ ವಿದ್ಯಾರ್ಥಿಗಳ ಬಹುದಿನ ಬೇಡಿಕೆಯಾಗಿರುವ ಸೋಂಪುರ ಗ್ರಾಮದಿಂದ ಸಿಂದಗಿ ಪಟ್ಟಣಕ್ಕೆ ಬಸ್ಸಿನ ಸೌಕರ್ಯವನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಬೇಡಿಕೆಗೆ ಶಾಸಕ ಅಶೋಕ ಮನಗೂಳಿ ಅವರು ಸ್ಪಂದಿಸಿದ್ದಾರೆ. ಅವರಿಗೆ ಎಲ್ಲ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ.
ಲಕ್ಷ್ಮಿ ಪಾಟೀಲ, ವಿದ್ಯಾರ್ಥಿನಿ
ಎಚ್. ಜಿ. ಕಾಲೇಜ ಸಿಂದಗಿ
ಸಿಂದಗಿ ಘಟಕ ವಿಭಾಗೀಯ ನಿಯಂತ್ರಕ ರೇವಣಸಿದ್ದಪ್ಪ ಖೈನೂರು, ಸಿಂದಗಿ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ಜಿಲ್ಲಾ ಕೆಡಿಪಿ ಸದ್ಯಸ ನೂರು ಅಹಮ್ಮದ ಅತ್ತಾರ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಶಂಬೇವಾಡ ಸೇರಿದಂತೆ ಗ್ರಾಮ ಪಂಚಾಯಿತಿ ಸದ್ಯಸರು, ಸೋಂಪೂರ ಗ್ರಾಮದ ಹಿರಿಯರು ಯುವಕರು ಮಹಿಳೆಯರು ಉಪಸ್ಥಿತರಿದ್ದರು.