ಮುಂದಗೋಡ

ಇಂದು ಕಸಾಪ ಸಭೆ

ಇಂದು ಕಸಾಪ ಸಭೆ

ಮುಂಡಗೋಡ:ಡಿ.17ಮತ್ತು18ರಂದು ಜೊಯಿಡಾ ತಾಲೂಕಿನ ಉಳವಿಯಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಕುರಿತು ಚರ್ಚಿಸಲು ಡಿ.12ರಂದು ಸಂಜೆ 5 ಘಂಟೆಗೆ ಇಲ್ಲಿನ ಪಟ್ಟಣ ಪಂಚಾಯತ ಆವರಣದಲ್ಲಿರುವ ನಿವೃತ್ತ ನೌಕರರ ಭವನದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಸಭೆ ಕರೆಯಲಾಗಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ಎಸ್‌.ಡಿ.ಮುಡೆಣ್ಣವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಎಲ್ಲ ಅಜೀವ ಸದಸ್ಯರು, ಕಾರ್ಯಕಾರಿ ಮಂಡಳಿ ಪದಾಧಿಕಾರಿಗಳು, ಸದಸ್ಯರು, ತಾಲೂಕಿನ ಸಾಹಿತಿಗಳು, ಚಿಂತಕರು, ತಾಲೂಕಿನ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕನ್ನಡ ಅಭಿಮಾನಿಗಳು ಎಲ್ಲರೂ ತಪ್ಪದೆ ಹಾಜರಾಗಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆ ನೀಡಬೇಕು ಎಂದು ಅವರು ವಿನಂತಿಸಿಕೊಂಡಿದ್ದಾರೆ. 


ಸುದ್ದಿ ಓದಿ