ಉಪ ಚುನಾವಣೆ : ಮತ ಎಣಿಕೆ ಸಿಬ್ಬಂದಿಗಳಿಗೆ ತರಬೇತಿ
By-election: Training for vote counting staff
ಲೋಕದರ್ಶನ ವರದಿ
ಬಾಗಲಕೋಟೆ 28: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ-2026ರ ಮತ ಎಣಿಕೆ ಕಾರ್ಯ ಮೇ 4 ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದಿದ್ದು, ಈ ಹಿನ್ನಲೆಯಲ್ಲಿ ಮತ ಎಣಿಕೆ ಸಿಬ್ಬಂದಿಗಳಿಗೆ ಮಂಗಳವಾರ ತರಬೇತಿ ಕಾರ್ಯಕ್ರಮ ಜರುಗಿತು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡ ತರಬೇತಿಯನ್ನು ಉದ್ದೇಶಿಸಿ ಮಾತನಾಡಿದ ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳು ತಮ್ಮ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ತೋಟಗಾರಿಕೆ ವಿಜ್ಞಾನಗಳ
ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ. ಈಗಾಗಲೇ ಮತ ಎಣಿಕೆ ಕೇಂದ್ರ ಸಂಪೂರ್ಣ ಸಜ್ಜಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ತಿಳಿಸಿದರು. ಮತ ಎಣಿಕೆಗೆ ಒಟ್ಟು 14 ಟೇಬಲ್ಗಳನ್ನು
ಇರಿಸಲಾಗಿದ್ದು, ಪ್ರತಿ ಟೇಬಲ್ಗೆ ತಲಾ ಒಬ್ಬರಂತೆ ಮತ ಎಣಿಕಾ ಮೇಲ್ವಿಚಾರಕ, ಸಹಾಯಕ ಮತ್ತು ಮೈಕ್ರೋ ವೀಕ್ಷಕರು ಸೇರಿದಂತೆ ಒಟ್ಟು 63 ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಅಂಚೆ ಮತಪತ್ರ ಎಣಿಕೆಗೆ ಪ್ರತ್ಯೇಕ ಕೊಠಡಿ ಇದ್ದು, 2 ಟೇಬಲ್ ಇರಿಸಲಾಗಿದೆ.
ಮಾಡಲು ಟೇಬಲ್ ಸಹ ಇರಿಸಲಾಗಿದೆ ಎಂದು ತಿಳಿಸಿದರು. ಮಾಸ್ಟರ ಶಶಿಶೇಖರ ರೆಡ್ಡಿ ಅವರು ಪ್ರಾತ್ಯಕ್ಷಿಕೆಯ ಮೂಲಕ ಮತ ಏಣಿಕೆ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಟ್ಟರು. ಮತ ಎಣಿಕೆ ಪ್ರಕ್ರಿಯೆಯ ಎಲ್ಲ ಹಂತಗಳ ಕುರಿತು ವಿವರವಾದ
ಮಾಹಿತಿ ನೀಡಿದರು. ವಿವಿಎಂ ಯಂತ್ರಗಳ ಬಳಕೆ, ವಿವಿಪ್ಯಾಟ್ ಸ್ಲಿಪ್ಗಳ ಪರೀಶೀಲನೆ, ಮತ ಎಣಿಕೆ ವೇಳೆ ಅನುಸರಿಸಬೇಕಾದ ನಿಯಮಗಳು ಹಾಗೂ ಎಚ್ಚರಿಕೆ ಕ್ರಮಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು. ತರಬೇತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರರಾದ ವಾಸುದೇವ ಸ್ವಾಮಿ, ಡಾ.ಪ್ರದೀಪಕುಮಾರ ಸೇರಿದಂತೆ ಮತ ಎಣಿಕೆ ಮೇಲ್ವಿಚಾರಕರು, ಸಹಾಯಕರು ಹಾಗೂ ಮೈಕ್ರೋ ಆಬ್ಸರವರ್ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 