ಸಿ.ವಾಯ್.ಮೆಣಸಿನಕಾಯಿಯವರು ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಬೆಳಗಾವಿ 21: ಸಾಹಿತ್ಯ, ಪತ್ರಿಕಾರಂಗ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ ಸಾಹಿತಿ ಸಿ.ವಾಯ್.ಮೆಣಸಿನಕಾಯಿ ಅವರನ್ನು ಕೇರಳ ರಾಜ್ಯದ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಾಸರಗೋಡಿನ ಕನ್ನಡ ಗ್ರಾಮದಲ್ಲಿನ. ನವೆಂಬರ್ 28 ಮತ್ತು 29ರಂದು ನಡೆಯಲಿರುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವದ ಅಂಗವಾಗಿ, ನ. 29ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ದಿ.29 ರಂದು ನಡೆಯುವ ಸಮ್ಮೇಳನದಲ್ಲಿ ಗಡಿನಾಡು ಹೊರನಾಡು ಅನಿವಾಸಿ ಭಾರತೀಯ ಕನ್ನಡಿಗರು ಕನ್ನಡ ಸಂಘಟನೆಗಳ ಭಾಷಾ ಬಾಂಧವ್ಯದ ರಾಷ್ಟ್ರೀಯ ವಿಚಾರ ಸಂಕೀರ್ಣದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆಂದು ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಕಟಣೆ ತಿಳಿಸಿದ್ದಾರೆ.