ರಾಣಾ ಕಪೂರ್ ಲಂಚ ಆರೋಪ ಪ್ರಕರಣ ; ಸಿಬಿಐ ಅನೇಕ ಕಡೆ ದಾಳಿ
ಮುಂಬೈ, ಮಾರ್ಚ್ 09, ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರ 600 ಕೋಟಿ ರೂಪಾಯಿ ಲಂಚ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಮುಂಬೈನ 7 ಸ್ಥಳಗಳ ಮೇಲೆ ದಾಳಿ ಮಾಡಿದೆ. ಈ ನಡುವೆ ರಾಣಾ ಕಪೂರ್ ಬಂಧಿಸಲಾಗಿದ್ದು ನ್ಯಾಯಾಲಯ ಇದೆ 11ರ ತನಕ ಇಡಿ ವಶಕ್ಕೆ ನೀಡಿದೆ. ಸೋಮವಾರ ಸಿಬಿಐನ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಮುಂಬೈನ ಏಳು ಸ್ಥಳಗಳ ಮೇಲೆ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ರಾಣಾ ಕಪೂರ್ ವಿರುದ್ಧ ಆರ್ಥಿಕ ಅಪರಾಧ ಆರೋಪದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸಿಬಿಐ ಶುಕ್ರವಾರ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಗೆ ಸಂಬಂಧಿಸಿದ ಕಂಪನಿ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿತ್ತು. ಇದರ ಹಿನ್ನಲೆಯಲ್ಲಿ ಇಂದು ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ ವಿದೇಶಕ್ಕೆ ಹೊರಟಿದ್ದ ಅವರ ಮಗಳನನ್ನು ಏರ್ ಪೋರ್ಟ್ ನಲ್ಲಿ ಅಧಿಕಾರಿಗಳು ತಡೆದಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 