ಸಿಸಿ ರಸ್ತೆ ಕಾಮಗಾರಿ ಪರಿಶೀಲನೆ
ಬಳ್ಳಾರಿ ನವೆಂಬರ್ 07: ನಗರದ ವಾರ್ಡ್ ನಂ.21ರಲ್ಲಿ ಬರುವ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ 43 ಲಕ್ಷ ರೂಪಾಯಿ ವೆಚ್ಚದಲ್ಲಿ ಡಿಎಂಎಫ್ ಅನುದಾನದಲ್ಲಿ ಅಭಿವೃದ್ಧಿಪಡಿಸುತ್ತಿರುವ ಸಿ.ಸಿ ರಸ್ತೆ ಕಾಮಗಾರಿಯನ್ನು ಶನಿವಾರ ಬುಡಾ ಅಧ್ಯಕ್ಷರಾದ ದಮ್ಮೂರು ಶೇಖರ್ ಅವರು ಸ್ಥಳ ಪರಿಶೀಲನೆ ಮಾಡಿ ಉತ್ತಮ ಗುಣಮಟ್ಟದಲ್ಲಿ ನಿರ್ಮಿಸುವಂತೆ ಗುತ್ತಿಗೆದಾರನಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ರಾಬಕೊ ಹಾಲು ಒಕ್ಕೂಟದ ನಿರ್ದೇಶಕರಾದ ವೀರಶೇಖರ್ ರೆಡ್ಡಿ ಹಾಗೂ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರವಿಶಂಕರ್, ಇಂಜಿನಿಯರ್ ಆದ ನಹೀಂ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.