ಮನರಂಜನೆ

ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್

ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್

ಬೆಂಗಳೂರು, ಸೆಪ್ಟೆಂಬರ್ 18: ಚಂದನವನಕ್ಕೆ ಮಾದಕ  ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಮತ್ತೆ ಮೂವರಿಗೆ ನೋಟಿಸ್ ನೀಡಿದೆ.

ಕಾಟನ್ ಪೇಟೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ನ ಮೂವರಿಗೆ ನೋಟಿಸ್ ನೀಡಿದೆ.

ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್‌ ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿ ಅವರಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ರವಾನಿಸಿದ್ದಾರೆ. 

ಶನಿವಾರ ಬೆಳಗ್ಗೆ 10 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಸಿಸಿಬಿಯಿಂದ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಈ ಕುರಿತು ಸ್ಯಾಂಡಲ್ವುಡ್ ನಟ ನಿರೂಪಕ ಅಕುಲ್ ಬಾಲಾಜಿ ಪ್ರತಿಕ್ರಿಯಿಸಿ, ನನಗೆ ಸಿಸಿಬಿ ಪೊಲೀಸರಿಂದ ನೋಟಿಸ್ ‌ಬಂದಿದೆ. ಸದ್ಯ ಹೈದರಾಬಾದ್ನಲ್ಲಿದ್ದೇನೆ. ನಾಳೆ ಬೆಳಿಗ್ಗೆ 10 ಗಂಟೆಗೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ಅವರು ತಿಳಿಸಿದ್ದಾರೆ. 

ಸುದ್ದಿ ಓದಿ