ಸಿಸಿಬಿ ಪೊಲೀಸರ ಮಿಂಚಿನ ದಾಳಿ: ಗಾಂಜಾ ಮಾರಾಟ ಅಂತರಾಜ್ಯ ಜಾಲ ಪತ್ತೆಇಬ್ಬರು ಆರೋಪಿಗಳ ಬಂಧನ, ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ
CCB police raid: Interstate marijuana trafficking ring busted, two accused arrested, marijuana worth
ಬೆಳಗಾವಿ 31: ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಜಾಲದ ಮೇಲೆ ಸಿಸಿಬಿ ಪೊಲೀಸರು ಭರ್ಜರಿ ಬೇಟೆ ನಡೆಸಿ ಅಕ್ರಮ ಗಾಂಜಾ ಮಾರಾಟದ ಅಂತರಾಜ್ಯ ಜಾಲ ಪತ್ತೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಂಗ್ರಾಳಿಯ ಬಾಳು ಅಲಿಯಾಸ್ ಮನೋಹರ ಹುದ್ದಾರ ಹಾಗೂ ಸಂತಿ ಬಸ್ತವಾಡದ ಸಚೀನ ಅಂಕಲಗಿ ಆರೋಪಿಗಳಾಗಿದ್ದು, ಸಿಸಿಬಿ ಇನ್ಸ್‌ಪೆಕ್ಟರ್ ಮಂಜುನಾಥ ನಾಯಕ ಅವರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ, ಬೆಳಗಾವಿ ನಗರ ಸಿಸಿಬಿ ಪೊಲೀಸರು ಸೋಮವಾರ ಮಚ್ಚೆ ಇಂಡಸ್ಟ್ರಿಯಲ್ ಏರಿಯಾದ ಜಾಂಬೋಟಿ ರಸ್ತೆ ಪಕ್ಕದ ಪಾಳು ಬಿದ್ದ ಕಟ್ಟಡದ ಮೇಲೆ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುವನ್ನು ವಶ ಪಡಿಸಿಕೊಂಡಿದ್ದಾರೆ.ಬಂಧಿತರಿಂದ ಅಂದಾಜು 1 ಲಕ್ಷ ರೂಪಾಯಿ ಮೌಲ್ಯದ 2.010 ಕೆ.ಜಿ ಗಾಂಜಾ, ಮೊಬೈಲ್ ಫೋನ್‌ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಜಾಲದ ಹಿಂದೆ ಮಹಾರಾಷ್ಟ್ರದ ಅಹಮದ್ ನಗರದ ಮಹಿಳೆ ಹಾಗೂ ಮತ್ತೊಬ್ಬ ವ್ಯಕ್ತಿಯ ಕೈವಾಡವಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ. ಸಿಸಿಬಿ ತಂಡದ ಈ ಯಶಸ್ವಿ ಕಾರ್ಯಾಚರಣೆಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 