ಮದ್ಯ ಸಾಗಾಟ ಮಾಡುತ್ತಿದ್ದವ ಸಿಸಿಬಿ ಬಲೆಗೆ
ಬೆಂಗಳೂರು, ಏ.28, ಲಾಕ್ ಡೌನ್ ಜಾರಿಯಲ್ಲಿದ್ದರೂ ಅಕ್ರಮವಾಗಿ ವಿದೇಶಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.31 ವರ್ಷದ ರೋಷನ್ ಬತೇಜ್ ಬಂಧಿತ ಆರೋಪಿ.ಬಂಧಿತ ಮೌಂಟ್ ಕಾರ್ಮೆಲ್ ಕಾಲೇಜು ರಸ್ತೆ ಮಾರ್ಗವಾಗಿ ಪ್ಯಾಲೆಸ್ ರಸ್ತೆಯ ಸರ್ವೀಸ್ ರಸ್ತೆಯ ಮೂಲಕ ಮದ್ಯವನ್ನು ಸಾಗಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಂಧಿತನಿಂದ 22 ಲೀಟರ್ನ 24 ಫಾರಿನ್ ಲಿಕ್ಕರ್ ಬಾಟಲಿಗಳು, ಒಂದು ಐ10 ಕಾರು ಹಾಗೂ ಒಂದು ಐ ಫೋನ್-11 ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 