ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಸಿಐಟಿಯು ನಿಂದ ಕಾರವಾರದಲ್ಲಿ ಪ್ರತಿಭಟನೆ
CITU protests in Karwar against labor law amendment
ಕಾರವಾರ 25: ಕಾರ್ಮಿಕ ಕಾನೂನುಗಳಲ್ಲಿ ಬಂಡವಾಳಗಾರರ ಪರ ತಿದ್ದುಪಡಿಗಳನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಜಿಲ್ಲಾ ಸಮಿತಿಯು ಬುಧವಾರ ನಗರದ ಹಬ್ಬುವಾಡಾದ ಕಾರ್ಮಿಕ ಇಲಾಖೆ ಕಚೇರಿ ಬಳಿ ಪ್ರತಿಭಟನೆ ನಡೆಸಿತು.
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಜಿಲ್ಲಾ ಸಿಐಟಿಯು ಸಮಿತಿಯು ಕಾರ್ಮಿಕ ಇಲಾಖೆಗೆ ಈ ಸಂಬಂಧ ಮನವಿ ಸಲ್ಲಿಸಿತು.ಇಸ್ ಆಫ್ ಡೂಯಿಂಗ್ ಬ್ಯುಸಿನೆಸ್ ನೆಪದಲ್ಲಿ ರಾಜ್ಯ ಸರ್ಕಾರವು ಕಾರ್ೊರೇಟ್ ಬಂಡವಾಳಗಾರರು ಮತ್ತು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಯತ್ನಿಸುತ್ತಿದೆ ಎಂದು ಸಿಐಟಿಯು ಜಿಲ್ಲಾ ಪದಾಧಿಕಾರಿಗಳು ಆರೋಪಿಸಿದರು.2019 ಮತ್ತು 2020ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಬದಲು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಮೂಲಕ ಕಾರ್ಮಿಕ ವಿರೋಧಿ ಅಂಶಗಳನ್ನು ಹಿಂಬಾಗಿಲಿನಿಂದ ತರಲು ಪ್ರಯತ್ನಿಸುತ್ತಿದೆ. ಈ ತಿದ್ದುಪಡಿಗಳು ಜಾರಿಯಾದರೆ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕಾನೂನು ರಕ್ಷಣೆಯಿಂದ ಹೊರಗುಳಿಯುತ್ತಾರೆ ಮತ್ತು ಅನೇಕರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಸಿಐಟಿಯು ಎಚ್ಚರಿಸಿದೆ.ಪ್ರಮುಖ ತಿದ್ದುಪಡಿ ಪ್ರಸ್ತಾಪಗಳು :ದಿನದ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸುವುದು. ಉತ್ಪಾದನಾ ವಲಯದಲ್ಲಿ ಮಹಿಳಾ ಕಾರ್ಮಿಕರನ್ನು ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ನಿಯೋಜಿಸಬೇಕು. ಅಪಾಯಕಾರಿ ಉತ್ಪಾದನಾ ವಿಧಾನಗಳಲ್ಲಿ ಮಹಿಳೆಯರ ನೇಮಕಾತಿಯ ಮೇಲಿನ ನಿಬಂರ್ಧಗಳನ್ನು ಸಡಿಲಗೊಳಿಸಬೇಕು. ಕಾರ್ಖಾನೆಗಳ ವ್ಯಾಖ್ಯಾನ ಬದಲಾಯಿಸಿ, ಲಕ್ಷಾಂತರ ಕಾರ್ಮಿಕರನ್ನು ಕಾರ್ಖಾನೆ ಕಾಯಿದೆಯ ಸವಲತ್ತುಗಳಿಂದ ಹೊರಗಿಡದಂತೆ ನೋಡಿಕೊಳ್ಳಬೇಕುಕಾರ್ಖಾನೆಗಳನ್ನು ಮುಚ್ಚಲು, ಲೇ-ಆಫ್ ಮಾಡಲು, ರೆಟ್ರೆಂಚ್ ಮಾಡಲು ಸರ್ಕಾರದ ಪೂರ್ವಾನುಮತಿ ಪಡೆಯುವ ಕಾರ್ಮಿಕರ ಮಿತಿಯನ್ನು 100 ರಿಂದ 300ಕ್ಕೆ ಹೆಚ್ಚಿಸುವುದು. ಗುತ್ತಿಗೆ ಕಾರ್ಮಿಕರ ಪರವಾನಗಿ ಮಿತಿಯನ್ನು 50ಕ್ಕೆ ಹೆಚ್ಚಿಸುವ ಮೂಲಕ ಮಾಲೀಕರಿಗೆ ಗುತ್ತಿಗೆ ಕಾರ್ಮಿಕರ ಸಂಖ್ಯೆಯನ್ನು ಅನಿಯಂತ್ರಿತವಾಗಿ ಹೆಚ್ಚಿಸಲು ಅವಕಾಶ ನೀಡುವುದು.
ಕಾನೂನುಗಳ ಅನುಷ್ಠಾನವನ್ನು ಖಾತರಿಪಡಿಸುವ ಕಾರ್ಖಾನೆ, ಸಂಸ್ಥೆಗಳ ತಪಾಸಣೆಗಳಿಗೆ ನಿಬಂರ್ಧ ಹೇರುವುದು. ಕನಿಷ್ಠ ವೇತನವನ್ನು ಅವೈಜ್ಞಾನಿಕವಾಗಿ ನಿಗದಿಪಡಿಸುವುದ ಕೈ ಬಿಡಬೇಕು. ಕೈಗಾರಿಕಾ ವಿವಾದಗಳ ಇತ್ಯರ್ಥದಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು . ಕಾರ್ಮಿಕ ಸಂಘಗಳಿಗೆ ಮಾನ್ಯತೆ ನೀಡುವುದನ್ನು ಕಡ್ಡಾಯಗೊಳಿಸದಿರುವುದು ಮತ್ತು ನೋಂದಣಿಗೆ ಅಡಚಣೆ ತರುವುದನ್ನು ಕೈಬಿಡಬೇಕು.ದೇಶದ ಹಲವು ರಾಜ್ಯಗಳಲ್ಲಿ ಈ ತಿದ್ದುಪಡಿಗಳು ಜಾರಿಯಾಗಿದ್ದು, ಇದರಿಂದ ಕಾರ್ಮಿಕರು ವಲಸೆ ಹೋಗುತ್ತಿದ್ದಾರೆ. ಕರ್ನಾಟಕ ಸರ್ಕಾರವು ಇಂತಹ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ನಿರಾಕರಿಸಬೇಕು ಎಂದು ಸಿಐಟಿಯು ಒತ್ತಾಯಿಸಿದೆ. ಸಿಐಟಿಯು ಕರ್ನಾಟಕ ರಾಜ್ಯ ಸಮಿತಿ ನಡೆಸಿದ ಸಹಿ ಸಂಗ್ರಹ ಚಳುವಳಿಯ ಭಾಗವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಗ್ರಹಿಸಿದ ಸಹಿಗಳ ಮೊದಲ ಕಂತನ್ನು ಪ್ರತಿಭಟನಾಕಾರರು ಕಾರ್ಮಿಕ ಇಲಾಖೆಯ ಅಧಿಕಾರಿಗೆ ಸಲ್ಲಿಸಿದರು.ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕ ಇಲಾಖೆಯಲ್ಲಿ ಮಾಡ ಹೊರಟೊರುವ ತಿದ್ದುಪಡಿಗಳನ್ನು ಕೈಬಿಟ್ಟು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ದೃಢ ನಿಲುವು ತೆಗೆದುಕೊಳ್ಳಬೇಕೆಂದು ಸಿಐಟಿಯು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲಾಯಿತು. ಸಂಘಟನೆಯ ಅಧ್ಯಕ್ಷ ತಿಲಕ್ ಗೌಡ, ಪ್ರಧಾನ ಕಾರ್ಯದರ್ಶಿ ಸಿ. ಆರ್. ಶಾನಭಾಗ, ದಾಂಡೇಲಿಯ ಕಾರ್ಮಿಕ ಮುಖಂಡ ಸ್ಯಾಮಸನ್, ಜೊಯಿಡಾ ತಾಲೂಕಿನ ಯಮುನಾ ಹಾಗೂ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 