ವಿಬಿಜಿ ರಾಮ್ ಜಿ ಕೂಲಿಕಾರರೊಂದಿಗೆ ಸಿಎಂ ಸಂವಾದ

ವಿಬಿಜಿ ರಾಮ್ ಜಿ ಕೂಲಿಕಾರರೊಂದಿಗೆ ಸಿಎಂ ಸಂವಾದ CM's interaction with VBG Ramji workers


ಗದಗ 02:  ಮಳೆ ಕೊರತೆಯಿಂದ  ಸಂಕಷ್ಟದಲ್ಲಿರುವ ರೈತರ ಅಲಳು ಆಲಿಸಿ ಬರ ಪರಿಸ್ಥಿತಿಯ ಅವಲೋಕಿಸಲು ಮಂಗಳವಾರ ಆಗಮಿಸಿದ್ದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು   ತಾಲೂಕಿನ ಕುರ್ತಕೋಟಿ ಗ್ರಾಮದ ವಿಬಿಜಿ ರಾಮ್ ಜಿ ಕೂಲಿಕಾರರೊಂದಿಗೆ ಸಂವಾದ ನಡೆಸಿದರು. ಈ ಹಿಂದೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮುದಾಯ ಕಂದಕ ಬದು ಕಾಮಗಾರಿಗೆ ಅವಕಾಶವಿತ್ತು, ಈಗಿನ "ವಿಕಸಿತ ಭಾರತ - ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)" ಯೋಜನೆಯಲ್ಲೂ ಆ ಕಾಮಗಾರಿ ಮಂದುವರಿಸ ಬೇಕು ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಕುಂಠಿತಗೊಂಡಿರುವ ಸಂದರ್ಭದಲ್ಲಿ ಕೂಲಿ ಕೆಲಸದ ಕೊರತೆಯಿಂದ ಕುಟುಂಬ ನಿರ್ವಹಣೆಗೆ ತೊಂದರೆಯಾಗುತ್ತಿದೆ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಸಿಎಂ ಗಮನಕ್ಕೆ ತಂದರು.ರೈತರು ತಮ್ಮ ಜಮೀನಿನಲ್ಲಿ ಬದು ನಿರ್ಮಾಣ ಮಾಡಿಕೊಳ್ಳುವುದರಿಂದ ಅಂತರ್ಜಲ ಪ್ರಮಾಣ ಹೆಚ್ಚಾಗಲಿದೆ. ಬದು ನಿರ್ಮಾಣದಿಂದ ಜಮೀನಿನಲ್ಲಿಯ ಮಣ್ಣು ಕೊಚ್ಚಿ ಹೋಗದೆ ಜಮೀನಿನಲ್ಲಿಯೇ ಉಳಿಯಲಿದೆ. ಮಳೆಯಾದಾಗ ಹೆಚ್ಚುವರಿ ನೀರು ಹರಿದು ಕೊಚ್ಚಿ ಹೋಗದಂತೆ ಬದುವಿನಲ್ಲಿ ಮಣ್ಣಿನ ಏರಿ ಹಾಕುವುದರಿಂದಫಲವತ್ತಾದ ಮಣ್ಣು ಜಮೀನಿನಲ್ಲಿಯೇ ಉಳಿಯಲಿದೆ.

ಜತೆಗೆ ಅಂತರ್ಜಲ ವೃದ್ಧಿಯಾಗಲಿದೆ. ರೈತರು ಇದರಿಂದ ಉತ್ತಮ ಇಳುವರಿಯನ್ನು ಪಡೆಯ ಬಹುದಾಗಿದೆ ಎಂದು ವಿವರಿಸಿದ ಗ್ರಾಪಂ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಇನಾಮತಿ ಅವರು ಮುಖ್ಯಮಂತ್ರಿ ಅವರಲ್ಲಿ ಕಂದಕ ಬದು ಕಾಮಗಾರಯ ಉಪಯುಕ್ತತೆಯ ಕುರಿತು ಮನವರಿಕೆ ಮಾಡಿಕೊಟ್ಟು ಕಾಮಗಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿಕೊಂಡರು.ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಪರೀಶೀಲನೆ ನಡೆಸಿ ಕ್ರಮಕೈಗೊಳ್ಳಲಾಗುವ ಭರವಸೆ ನೀಡಿದರು. ಬರ ಪರಿಸ್ಥಿತಿ ಕುರಿತು ಸಮಗ್ರವಾಗಿ ಪರೀಶೀಲನೆ ನಡೆಸಲಾಗುತ್ತಿದೆ. ಇನ್ನಷ್ಟು ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಅಧ್ಯಯನ ಮಾಡಲಾಗುವುದು ಎಂದರು.  ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರೆಡ್ಡಿ ಸರ್, ಮಾಜಿ ಸಚಿವರು,  ಶಾಸಕರಾದ ಮಾನ್ಯ ಎಚ್‌.ಕೆ. ಪಾಟೀಲ ಸರ್, ಮಾನ್ಯ ಸಿ.ಸಿ. ಪಾಟೀಲ, ಮಾನ್ಯ ಎನ್‌.ಎಚ್‌. ಕೋನರೆಡ್ಡಿ,  ತಾಪಂ ಕಾರ್ಯನಿರ್ವಾಹ ಅಧಿಕಾರಿಯವರಾದ ಡಾ. ಎಚ್‌.ಎಸ್‌. ಜಿನಗಿ,  ಸಹಾಯಕ ನಿರ್ದೇಶಕರಾದ ಕುಮಾರ ಪೂಜಾರ, ಗ್ರಾಪಂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಇದ್ದರು.