ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
ಯಲ್ಲಾಪುರ ಜು. 29 ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಯಲ್ಲಾಪುರ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್ -19 ಲಸಿಕೆ ನೀಡುವ ಕೇಂದ್ರವನ್ನೂ ಪರಿಶೀಲನೆ ಮಾಡಿದರು.
ನಂತರ ಒಳ ಹಾಗೂ ಹೊರ ರೋಗಿಗಳ ಆರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮವಹಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.