ಬಾಗಲಕೋಟೆ

ಡಿಸೆಂಬರ 1 ರಂದು ಜಿಲ್ಲೆಗೆ ಸಿಎಂ ಡಿ.ಕೆ.ಶಿವಕುಮಾರ ಕಾಡರಕೊಪ್ಪ, ಅನವಾಲ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ

ಡಿಸೆಂಬರ 1 ರಂದು ಜಿಲ್ಲೆಗೆ ಸಿಎಂ ಡಿ.ಕೆ.ಶಿವಕುಮಾರ ಕಾಡರಕೊಪ್ಪ, ಅನವಾಲ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ
CM D.K. Shivakumar to visit the district on December 1; to lay the foundation stone for the Kadarako

            ಬಾಗಲಕೋಟೆ 28  : ಬೀಳಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಕಾಡರಕೊಪ್ಪ, ಅನವಾಲ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಿಸೆಂಬರ್ 1 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.                               

              ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಮಹತ್ವದ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.           

                  ಕಾರ್ಯಕ್ರಮಕ್ಕೆ 25 ಸಾವಿರಕ್ಕೂ ಅಧಿಕ ಜನರು ಆಗಮಿಸುವ ನೀರೀಕ್ಷೆಯಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಸಮರ​‍್ಕ ಆಸನ, ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಬೇಕು. ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಬೇಕು ಎಂದು ತಿಳಿಸಿದರು.   


ಸುದ್ದಿ ಓದಿ