ಹಿರಿಯ ನಟಿ ಜಯಂತಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಬೆಂಗಳೂರು, ಜುಲೈ 26 ಹಿರಿಯ ನಟಿ ಜಯಂತಿ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಲವು ಭಾಷೆಗಳ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ಅಭಿನಯ ಶಾರದೆ ಎಂಬ ಬಿರುದಿಗೆ ಅನ್ವರ್ಥವಾಗಿದ್ದರು.
ಎಡಕಲ್ಲು ಗುಡ್ಡದ ಮೇಲೆ, ಮಿಸ್ ಲೀಲಾವತಿ, ಜೇನು ಗೂಡು, ಬಹದ್ದೂರ್ ಗಂಡು ಮೊದಲಾದ ಚಿತ್ರಗಳಲ್ಲಿನ ಅವರ ಅಭಿನಯ ಜನಮನ ಸೂರೆ ಗೊಂಡಿತ್ತು. ಎಲ್ಲ ವಿಧವಾದ ಪಾತ್ರಗಳಲ್ಲೂ ಲೀಲಾಜಾಲವಾಗಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಅವರ ನಿಧನದಿಂದ ನಾಡು ಅದ್ಭುತ ಕಲಾವಿದೆಯನ್ನು ಕಳೆದುಕೊಂಡಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.