ರೈತರ ಮೇಲಿನ ಮೊಕದ್ದಮೆಗಳನ್ನು ವಾಪಾಸ್ ಪಡೆಯುವಂತೆ ಸಿಎಂ ಸೂಚನೆ
ಬೆಂಗಳೂರು, ಆ 26 ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರೈತ ಸಂಘಟನೆಗಳ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರ ಜತೆ ಸುದೀರ್ಘ ಸಭೆ ನಡೆಸಿದರು.
ರೈತ ಮುಖಂಡರ ಮನವಿ ಹಿನ್ನೆಲೆಯಲ್ಲಿ ರೈತ ಹೋರಾಟಗಾರರ ಮೇಲಿನ ಮೊಕದ್ದಮೆಗಳ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದ ಬಿಎಸ್ವೈ ಇಂದು ಸಂಜೆ ಒಳಗೆ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.
ಉತ್ತರ ಕರ್ನಾಟಕದ ಸೇರಿ ಪ್ರವಾಹದಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಹಾಗೂ ಬೆಳೆ ನಾಶ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ ಬೆಳೆ ನಾಶವಾಗಿರುವ ರೈತರಿಗೆ ಸೂಕ್ತ ಪರಿಹಾರ ಸರ್ಕಾರ ನೀಡುವಂತೆ ಮನವಿ ರೈತ ಮುಖಂಡರು ಮನವಿ ಮಾಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 