ಲಾಕ್ ಡೌನ್ ನಿಯಮ ಸಡಿಲ, ಅಧಿಕಾರಿಗಳ ಜೊತೆ ಸಿಎಂ ಪರಾಮರ್ಶೆ
ಬೆಂಗಳೂರು,
ಏ 18, ರಾಜ್ಯದಲ್ಲಿ ಇದೆ 20 ರ ಬಳಿಕ ಲಾಕ್ ಡೌನ್ ನಿಯಮಗಳನ್ನು
ಸಡಿಲಗೊಳಿಸಬೇಕೇ, ಬೇಡವೇ ಎಂಬುದರ ಬಗ್ಗೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹಿರಿಯ
ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ದೇಶಾದ್ಯಂತ ಕೊರೊನಾ ಸೋಂಕಿನ ಕಾರಣ ಮೇ.3
ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಇಂದು ಮಧ್ಯಾಹ್ನ ಹಿರಿಯ ಅಧಿಕಾರಿಗಳ ಜೊತೆ
ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಿರುವ ಮುಖ್ಯಮಂತ್ರಿ ಅವರು, ಲಾಕ್ ಡೌನ್
ಸಡಿಲಿಕೆ ಕ್ರಮ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.ಲಾಕ್ ಡೌನ್ ಸಡಿಲಿಕೆ
ಮಾಡಿದರೆ ಯಾವುದಕ್ಕೆ ವಿನಾಯಿತಿ ನೀಡಬೇಕು, ಯಾವುದಕ್ಕೆ ವಿನಾಯಿತಿ ಬೇಡ ಒಂದು ವೇಳೆ
ಸಡಿಲಿಕೆ ಮಾಡಿದರೆ ಮುಂದೆ ಏನೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ
ಇಂದಿನ ಸಭೆಯಲ್ಲಿ ಪರಾಮರ್ಶೆ ನಡೆಯಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 