ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಸಿಎಂ ಚರ್ಚೆ

ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಸಿಎಂ ಚರ್ಚೆ

ದೆಹಲಿ: ಮೇ 21: ದೆಹಲಿ ಪ್ರವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ತು ಮತ್ತು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕುರಿತು ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅಮಿತ್ ಶಾ ಅರ್ಜೆಂಟ್ ಕೆಲಸದ ಮೇಲೆ ಬೇರೆ ಕಡೆ ಹೋಗಿದ್ದರಿಂದ ಭೇಟಿ ಮಾಡಲು ಆಗಲಿಲ್ಲ. ದೂರವಾಣಿಯಲ್ಲೇ ಸುದೀರ್ಘವಾಗಿ ಮಾತಾನಾಡಿದ್ದೇವೆ ಎಂದು ಹೇಳಿದರು.

ಇಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಜೊತೆಯೂ ಮಾತನಾಡಿದ್ದೇನೆ. ಸಂಪುಟ ವಿಸ್ತರಣೆ ಕುರಿತು ಯಾವುದೇ ರೀತಿಯ ಚರ್ಚೆಗಳಾಗಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಮಳೆಯಾಗಿರುವುದರಿಂದ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳಿಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸೂಚನೆ ನೀಡಲಾಗಿದೆ. ಎನ್‌ಡಿಆರ್‌ಎಫ್ ನಿಧಿಯಲ್ಲಿ ಪರಿಹಾರ ಬಿಡುಗಡೆ ಮಾಡಲಾಗುವುದು. ಪರಿಸ್ಥಿತಿ ಅವಲೋಕಿಸಿ ದಾವೋಸ್ ಪ್ರವಾಸದ ಬಗ್ಗೆ ನಿರ್ಧಾರ ಮಾಡ್ತಿನಿ ಎಂದು ಸಿಎಂ ತಿಳಿಸಿದರು.

ಸುದ್ದಿ ಓದಿ