ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,375 ಮಂದಿಗೆ ಸೋಂಕು, 201 ಸಾವು
ನವದೆಹಲಿ, ಜ 5: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 16,375 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 201 ಮಂದಿ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಈವರೆಗೆ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 10,356,844ಕ್ಕೆ ತಲುಪಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ತಿಳಿಸಿದೆ. ಸೋಮವಾರ, ಮಂಗಳವಾರ ಸೋಂಕು ಪ್ರಕರಣ, ಸಾವುಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ ಎಂದು ಹೇಳಿದೆ. ಒಟ್ಟು ಸೋಂಕು ಪ್ರಕರಣಗಳಲ್ಲಿ ಕೇವಲ 2,31,035 ಸಕ್ರಿಯ ಪ್ರಕರಣಗಳಿದ್ದು, 9,97,958 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,49,850 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.