ಭಯೋತ್ಪಾದನೆ ವಿರುದ್ಧ ರಾಷ್ಟ್ರ ಒಗ್ಗೂಡಿ ನಿಂತಿದೆ: ರಾಜ್ ನಾಥ್ ಸಿಂಗ್
ದೆಹಲಿ, ಫೆ 14, ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಗೌರವ ಸಲ್ಲಿಸಿದರು. ಪುಲ್ವಾಮಾ ದಾಳಿಯ ಹುತಾತ್ಮರಿಗೆ ಗೌರವ ಸಲ್ಲಿಸುವುದಾಗಿಯೂ, ತಾಯಿನಾಡಿನ ಸಾರ್ವಭೌಮತ್ವ ಮತ್ತು ಸಮಗ್ರತೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ಧೈರ್ಯಶಾಲಿಗಳು ಮತ್ತು ಅವರ ಕುಟುಂಬಗಳಿಗೆ ದೇಶ ಎಂದೆಂದಿಗೂ ಕೃತಜ್ಞರಾಗಿರಬೇಕು. ಪುಲ್ವಾಮಾ ಭೀಕರ ದಾಳಿಯ ಸಮಯದಲ್ಲಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರನ್ನು, ಅವರ ತ್ಯಾಗವನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ. ಅವರ ತ್ಯಾಗವನ್ನು ದೇಶ ಎಂದಿಗೂ ಮರೆಯುವಂತಿಲ್ಲ. ಇಡೀ ರಾಷ್ಟ್ರ ಭಯೋತ್ಪಾದನೆ ವಿರುದ್ಧ ಒಗ್ಗೂಡಿ ನಿಂತಿದೆ. ನಮ್ಮ ಹೋರಾಟ ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 