ರಾಷ್ಟ್ರೀಯ

ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ 96.59ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ 96.59ಕ್ಕೆ ಏರಿಕೆ

ನವದೆಹಲಿ, ಜ 18:ಭಾರತದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1 ಕೋಟಿ 2 ಲಕ್ಷದ 10  ಸಾವಿರಕ್ಕೆ ತಲುಪುವುದರೊಂದಿಗೆ ಈ ಪ್ರಮಾಣ ಶೇ 96.59ಕ್ಕೆ ಏರಿದೆ.ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆ 15  ಸಾವಿರಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮುಂದುವರಿದಿದ್ದು, ಕಳೆದ 24 ತಾಸಿನಲ್ಲಿ 13, 788 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 14,000  ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಸದ್ಯದ ಸಕ್ರಿಯ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆ ಐದು ಪಟ್ಟು ಹೆಚ್ಚಿದೆ.

 ಇದುವರೆಗೆ ದೃಢಪಟ್ಟ ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೇವಲ ಶೇ 1.97ರಷ್ಟಿದೆ. ಸುಮಾರು ಎರಡು ಲಕ್ಷ ಸಕ್ರಿಯ ಪ್ರಕರಣಗಳ ಪೈಕಿ ಶೇ 60 ಸೋಂಕಿತರು ಮನೆಗಳಲ್ಲಿ ಸಂಪರ್ಕ ತಡೆಯಲ್ಲಿದ್ದು, ಕಡಿಮೆ ರೋಗ ಲಕ್ಷಣಗಳನ್ನು ಹೊಂದಿದ್ದಾರೆ.ದೇಶಾದ್ಯಂತ ವೈದ್ಯಕೀಯ ಮೂಲಸೌಕರ್ಯ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೇಂದ್ರದ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುತ್ತಿರುವುದು, ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಮುನ್ನೆಲೆ ಕಾರ್ಯಕರ್ತರ ನಿರಂತರ ಶ್ರಮದಿಂದ ದೇಶದಲ್ಲಿ ಚೇತರಿಕೆಯ ಪ್ರಮಾಣ ಗಣನೀಯ ಏರಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಪ್ರಮಾಣ ಶೇ 1.44ರಷ್ಟಿದ್ದು. ಕಳೆದ 24 ತಾಸಿನಲ್ಲಿ 145 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

  


ಸುದ್ದಿ ಓದಿ