ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ 97.32ಕ್ಕೆ ಏರಿಕೆ
ನವದೆಹಲಿ, ಫೆ 18: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 12,881 ಕೊರೊನಾವೈರಸ್ ಸೋಂಕು ಪ್ರಕರಣಗಳು ವರದಿಯಾಗುವುದರೊಂದಿಗೆ ಈವರೆಗೆ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1,09,50,201ಕ್ಕೆ ಏರಿಕೆ ಯಾಗಿದೆ.ಈವರೆಗೆ 1,06,56,845 ಮಂದಿ ಸೋಂಕಿತರು ಗುಣಮುಖರಾಗುವುದರೊಂದಿಗೆ ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇಕಡ 97.32ಕ್ಕೆ ಏರಿಕೆಯಾಗಿದೆ. ಸದ್ಯ, ದೇಶದಲ್ಲಿ 1,37,342 ಸಕ್ರಿಯ ಪ್ರಕರಣಗಳಿದ್ದು, ಈ ವರೆಗೆ 94,22,228 ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.