ಮೊಹರಂ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಿಪಿಐ ಆರ್.ಆರ್. ಪಾಟೀಲ ಕರೆ
CPI's R.R. Patil calls for peaceful celebration of Muharram
ಲೋಕದರ್ಶನ ವರದಿ
ಮಹಾಲಿಂಗಪುರ 18: ಇದೇ ಜೂನ್ 26 ರಂದು ನಡೆಯಲಿರುವ ಮೊಹರಂ ಹಬ್ಬವನ್ನು ಮಹಾಲಿಂಗಪುರ ನಗರದಲ್ಲಿ ಯಾವುದೇ ಜಾತಿ, ಧರ್ಮ ಹಾಗೂ ಭೇದಭಾವವಿಲ್ಲದೆ ಸಹೋದರತ್ವ, ಸೌಹಾರ್ದತೆ ಮತ್ತು ಶಾಂತಿಯುತ ವಾತಾವರಣದಲ್ಲಿ ಆಚರಿಸಬೇಕೆಂದು ಸಿಪಿಐ ಆರ್.ಆರ್. ಪಾಟೀಲ ಕರೆ ನೀಡಿದರು.
ನಗರ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಿಂಗಪುರ ನಗರವು ಸದಾ ಸೌಹಾರ್ದತೆಗೆ ಹೆಸರಾಗಿದ್ದು, ಎಲ್ಲಾ ಸಮುದಾಯದ ಜನರು ಪರಸ್ಪರ ಸಹಕಾರದಿಂದ ಹಬ್ಬ-ಹರಿದಿನಗಳನ್ನು ಆಚರಿಸುತ್ತ ಬಂದಿದ್ದಾರೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಸ್ಥಳೀಯ ಪಿಎಸ್ಐ ಕಿರಣ ಸತ್ತಿಗೇರಿ, ಮೊಹರಂ ಆಚರಣೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ, ಶಾಂತಿ ಹಾಗೂ ಸಹಕಾರದಿಂದ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 