ಬಾರಾಮುಲ್ಲಾದಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಬಾರಮುಲ್ಲಾ, 18: ಕೇಂದ್ರ ಮೀಸಲು ಪೊಲೀಸ್ ಪಡೆ-ಸಿಆರ್ ಪಿಎಫ್ ಹೆಡ್ ಕಾನ್ಸ್ ಸ್ಟೆಬಲ್ ಒಬ್ಬರು ತಮ್ಮ ಸರ್ವೀಸ್ ಪಿಸ್ತೂಲ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕಾಶ್ಮೀರದ ಸಿಆರ್ ಪಿಎಫ್ ಕ್ಯಾಂಪ್ ನಲ್ಲಿ ಬುಧವಾರ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಿಆರ್‌ಪಿಎಫ್ ನ 92 ಬೆಟಾಲಿಯನ್‌ನ ವಾಡುರಾ ಕ್ಯಾಂಪ್ ನಲ್ಲಿ ಇಂದು ಬೆಳಿಗ್ಗೆ ಗುಂಡಿನ ಶಬ್ಧ ಕೇಳಿದಾಗ ಕೆಲವು ಕಾಲ ಆತಂಕ ಉಂಟಾಗಿತ್ತು.. ಇತರ ಸಿಬ್ಬಂದಿ ತಕ್ಷಣವೇ ಗುಂಡಿನ ದಾಳಿ ಕೇಳಿದ ಸ್ಥಳಕ್ಕೆ ಧಾವಿಸಿ, ಸಿಬ್ಬಂದಿ ಒಡಿಶಾದ ರಾಜನ್ ಕುಮಾರ್ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡರು.
ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದಾಗ್ಯೂ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಒತ್ತಡದಿಂದ ಹೊರಬರಲು ಅಧಿಕಾರಿಗಳಿಗೆ ಯೋಗ ಪರಿಚಯಿಸಿದ ನಂತರವೂ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ನಿಂತಿಲ್ಲ.