ಮುಂದಗೋಡ

ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯ ಖಂಡಿಸಿ ಮುಂಡಗೋಡ ಬಂದ್ಗೆ ಕರೆ!

ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯ ಖಂಡಿಸಿ ಮುಂಡಗೋಡ ಬಂದ್ಗೆ ಕರೆ!


 ಲೋಕದರ್ಶನ ವರದಿ 

         ಮುಂಡಗೋಡ 11: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಹಾಗೂ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ನಾಳೆ (ನ.12) ಮುಂಡಗೋಡ ಪಟ್ಟಣ ಬಂದ್ಗೆ ಹಿಂದೂಪರ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಬಾಲಕಿಯ ಮೇಲೆ ನಡೆದಿರುವ ದೌರ್ಜನ್ಯವನ್ನು ಖಂಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯದೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

       ನಾಳೆ ಬೆಳಿಗ್ಗೆ 10 ಗಂಟೆಗೆ ಮುಂಡಗೋಡದ ಪ್ರವಾಸಮಂದಿರ ಆವರಣದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ. ಬಾಲಕಿಯರ ಸುರಕ್ಷತೆ ಖಾತ್ರಿಪಡಿಸುವುದು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಾಗರಿಕರು ಹಾಗೂ ವರ್ತಕರು ಸ್ವಯಂಪ್ರೇರಿತರಾಗಿ ಬಂದ್ಗೆ ಸಹಕರಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ. 


ಸುದ್ದಿ ಓದಿ