ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕರೆ

ಗದಗ 19:  ಗದಗ ತಾಲೂಕಿನ ನಿರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ತಾ  ಮತ್ತು  ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ ಗ್ರಾಮ ಸಂಪರ್ಕ ಯೋಜನೆ ಅಡಿಯಲ್ಲಿ  ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಗಳ  ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಜರುಗಿತು.

     ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಎಫ್.ಕೋಲಕಾರ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು. ಸಹಶಿಕ್ಷಕ ಎಸ್.ಸಿ.ಪೊಲೀಸ್ ಪಾಟೀಲ ಮಾತನಾಡಿ ಸರ್ಕಾರದಲ್ಲಿ ಮಕ್ಕಳಿಗಾಗಿ ವಿವಿಧ ಜನಪರ ಯೋಜನೆಗಳಿದ್ದು ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವುದು ಪಾಲಕರ ಆದ್ಯ ಕರ್ತವ್ಯ. ಪೋಷಕರು ಮಕ್ಕಳಿಗೆ ಶಿಕ್ಷಣವನ್ನು ನೀಡಿ ಅವರಲ್ಲಿ ಜ್ಞಾನವೆಂಬ ಬೀಜ ಮೊಳಕೆಯೊಡೆಯುವಂತೆ ಮಾಡಬೇಕು ಎಂದರು.

     ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ಕೊಣ್ಣುರು ಬೀದಿ ನಾಟಕ ಮತ್ತು ಗಾಣ ತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ಜಾನಪದ ಸಂಗೀತ ತಂಡದವರು ಶಾಲೆಯ ಸ್ವಚ್ಛತೆ ಹಾಗೂ ಸರಕಾರದ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು.

     ಇದೇ ಸಂದರ್ಭದಲ್ಲಿ ಶಾಲೆಯ ಸಹಶಿಕ್ಷಕರಾದ ಪಿ.ಬಿ.ಮುಧೋಳಮಠ, ಎ.ಎಂ.ಹಾದಿಮನಿ, ಪ್ರವೀಣ ಮಡಿವಾಳರ, ವಿಜಯ ಕಿರೇಸೂರು, ಎಂ.ಎಚ್.ಹುಲಗುರ, ಶಿಕ್ಷಕಿಯರಾದ ಎಲ್.ಡಿ.ಜಂತ್ಲಿ, ವಾರ್ತಾ ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾಥರ್ಿಗಳು ಇದ್ದರು