ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟದ ಕರೆ: ಎಸ್‌ಎಫ್‌ಐ ಸಭೆಯಲ್ಲಿ ತೀರ್ಮಾನ
Call for struggle to resolve students' educational problems: SFI meeting concludes
ಹಾವೇರಿ 27 : ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ತಾಲ್ಲೂಕು ಸಮಿತಿ ಸಭೆಯು ಭಾನುವಾರ ಹಾವೇರಿಯ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಎರಡು ತಿಂಗಳ ಕಳೆದರು ಜಿಲ್ಲೆಯಲ್ಲಿ ಹಾಸ್ಟೆಲ್ ಗಳು, ಬಸ್ಸಿನ ಸಮಸ್ಯೆಗಳು ಪರಿಹಾರವಾಗಿಲ್ಲ. ವಿದ್ಯಾರ್ಥಿಗಳಿಗೆ ಅನುಕೂಲಕ್ಕೆ ತಕ್ಕಂತೆ ಬಸ್ ಗಳಿಲ್ಲ, ಸಮಯಕ್ಕೆ ಬಸ್ ಬರುವುದಿವೆಂದು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ವಿದ್ಯಾರ್ಥಿನಿಯರ ಉಚಿತ ಬಸ್ ಪಾಸ್ ಜೊತೆಗೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಬೇಕು.ಹಾಸ್ಟೆಲ್ ಅರ್ಜಿ ಹಾಕಿದ ವಿದ್ಯಾರ್ಥಿಗಳಿಗೆ ಇನ್ನೂ ಹಾಸ್ಟೆಲ್ ಪ್ರಾರಂಭವಾಗಿಲ್ಲದಿರುವುದು ದುರಂತವಾಗಿದೆ. ಈ ಹಿಂದೆ ಸರ್ಕಾರದ ವಿರುದ್ಧ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಹಾಗೂ ನೂತನ ಹಾಸ್ಟೆಲ್ ಮಂಜೂರು ಮಾಡಬೇಕು ಎಂದು ರಾಜ್ಯಾದ್ಯಂತ ಎಸ್‌ಎಫ್‌ಐ ನೇತೃತ್ವದಲ್ಲಿ ನೆಡೆದ ವಿದ್ಯಾರ್ಥಿಗಳ ಪ್ರತಿಭಟನೆ ಪರಿಣಾಮವಾಗಿ ಇಡೀ ರಾಜ್ಯದಲ್ಲಿ ಹೆಚ್ಚುವರಿಯಾಗಿ ಹಾಸ್ಟೆಲ್ ಮಂಜೂರು ಆಗಿವೆ ಆದರೂ ರಾಜ್ಯ ಸರ್ಕಾರ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲು ಮುಂದಾಗಿಲ್ಲ.ಕಳೆದ ವರ್ಷದಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಲವರಿಗೆ ಬಂದಿಲ್ಲ. ಜಿಲ್ಲೆಯ ವಿವಿಧ ಶಾಲಾ-ಕಾಲೇಜ್ ಗಳಲ್ಲಿ ಡೋನೆಷನ್ ಹಾವಳಿ ವಿಪರೀತ ಹೆಚ್ಚಾಗಿದ್ದು ಜಿಲ್ಲಾಡಳಿತ ಹಾಗೂ ಸರ್ಕಾರ ತಡೆಯುವಲ್ಲಿ ವಿಫಲವಾಗಿದೆ. ಡೋನೆಷನ್ ಹಾವಳಿ ವಿರುದ್ಧ ಹೋರಾಟ ಮಾಡಲು ಹಾಗೂ ಡೋನೆಷನ್ ಹಾವಳಿ ನಿಯಂತ್ರಣ ಕಾಯ್ದೆ ಸಮರ್ಕವಾಗಿ ಜಾರಿಗಾಗಿ ತೀರ್ಮಾನಿಸಲಾಯಿತು. ಪ್ರಸಕ್ತ ವರ್ಷದಿಂದಲೇ ಕಾನೂನು ಮಹಾವಿದ್ಯಾಲಯ 3 ಮತ್ತು 5 ವರ್ಷದ ಕೋರ್ಸ್ ಪ್ರಾರಂಭಿಸಬೇಕು ಹಾಗೂ ಜಿಲ್ಲಾ ಕೇಂದ್ರದ ನಗರದಲ್ಲೇ ಮುನ್ಸಿಪಲ್ ಮೈದಾನದಲ್ಲಿರುವ ಕಾಲೇಜು ಕಟ್ಟಡದಲ್ಲಿ ತರಗತಿಗಳನ್ನು ಪ್ರಾರಂಭ ಮಾಡಬೇಕು.
ನೂತನ ಹಾವೇರಿ ವಿಶ್ವವಿದ್ಯಾಲಯ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಮಾಡಲು ಮುಂದಾಗಬೇಕು. ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಬಸ್ ಬಿಡಲು ಸೇರಿದಂತೆ ನಗರ ಸಾರಿಗೆ ವ್ಯವಸ್ಥೆ ಪ್ರಾರಂಭಿಸಬೇಕು. ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ರೂಪಿಸಲು ಎಸ್‌ಎಫ್‌ಐ ಸಭೆಯಲ್ಲಿ ಕಾರ್ಯಕರ್ತರು ಚರ್ಚೆ ನಡೆಸಿದರು.ಹಾಸ್ಟೆಲ್ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ, ಸಮಸ್ಯೆಗಳ ಪರಿಹಾರಕ್ಕಾಗಿ ಹಾಗೂ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜ್ ಪ್ರವೇಶದ ಜೊತೆಗೆ ಏಕಕಾಲಕ್ಕೆ ವಸತಿ ನಿಲಯಗಳನ್ನು ಪ್ರಾರಂಭಿಸಲು ಸೇರಿದಂತೆ ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್‌ಎಫ್‌ಐ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾಲೇಜ್ -ಹಾಸ್ಟೆಲ್ ಮುಖಂಡರು ಸುದೀರ್ಘ ಚರ್ಚೆ ನಡೆಸಿ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹ ಕಾರ್ಯದರ್ಶಿ ಕೃಷ್ಣ ನಾಯ್ಕ, ತಾಲ್ಲೂಕು ಮುಖಂಡರಾದ ಅರುಣ ಕುಮಾರ ಎನ್ , ವೈಶಾಲಿ ಎನ್, ಲಕ್ಷ್ಮೀ, ಅಕ್ಷತಾ ಹೆಚ್, ಸೌಮ್ಯಾ ಪೂಜಾರ್, ಚೈತ್ರ ಕೊರವರ್, ಸ್ಪೂರ್ತಿ ಮಾಳಗಿ, ಅನಿತಾ ಎಮ್, ಸೀಮಾ ಬೂದಿಹಾಳ, ಹಜ್ರತ್ ವಿ, ವಿಕಾಸ್ ಗೌಡ, ವಿಮಲ್ ನಾಥ್, ಸಂಪದ ಜಿ, ನಝಮೀನ್ ಎನ್ ಸಭೆಯಲ್ಲಿ ಭಾಗವಹಿಸಿದ್ದರು.ವಂದನೆಗಳೊಂದಿಗೆ,ಕೃಷ್ಣ ನಾಯ್ಕಜಿಲ್ಲಾ ಸಹಕಾರ್ಯದರ್ಶಿಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ)ಹಾವೇರಿ ಜಿಲ್ಲಾ ಸಮಿತಿ.9845787254
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 