ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ ಪಡೆಯಲು ಕರೆ
Call to avail 125 days of work under the VBJ Ramji scheme
ಶಿರಹಟ್ಟಿ 17: “ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ ದೊರೆಯಲಿದೆ” ತಾಲೂಕಿನ ಕೋಗನೂರು ಗ್ರಾಮದ ಸಮುದಾಯ ಕಾಮಗಾರಿ ಸ್ಥಳದಲ್ಲಿ ಗುರುವಾರ ವಿಬಿ ಜಿ ರಾಮ್ ಜಿ ಯೋಜನೆಯಡಿ ಐಇಸಿ ಚಟುವಟಿಕೆ ಕಾರ್ಯಕ್ರಮದಲ್ಲಿ ಯಾರು ಗುಳೆ ಹೋಗದೆ ತಮ್ಮ ಊರಿನಲ್ಲಿ ಸರ್ಕಾರ ನಿಗದಿ ಪಡಿಸಿದ ದಿನಗಳ ವರೆಗೆ ಕೆಲಸ ಮಾಡಬೇಕು. ವೈಯಕ್ತಿಕ ಕಾಮಗಾರಿಗಳ ಲಾಭ ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಲಾಯಿತು. ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ ಪಡೆಯಬೇಕಾದರೆ ಕೂಲಿಕಾರರು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ನಿಮಗೆ ನಿರಂತರ ಕೆಲಸ ನೀಡುತ್ತೇವೆ.
ಅಂದಾಗ 125 ದಿನಗಳ ಕಾಲ ಕೆಲಸ ಪಡೆದುಕೊಳ್ಳಬಹುದು. ಆ ನಿಟ್ಟಿನಲ್ಲಿ ಕೋಗನೂರು ಗ್ರಾಮದ ಎಲ್ಲಾ ಕೂಲಿಕಾರರು ಕೆಲಸ ಮಾಡಬೇಕು ಎಂದು ಹೇಳಿದರು.ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಜೀವನೋಪಾಯವನ್ನು ಹೆಚ್ಚಿಸುವಲ್ಲಿ ’ವಿಕಸಿತ ಭಾರತ ರೋಜಗಾರ್’ ಮತ್ತು ಅಜೀವಿಕ ಮಿಷನ್ ಗ್ರಾಮೀಣ ಯೋಜನೆಯ ಪಾತ್ರದ ಕುರಿತು ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಲಾಯಿತು. *ಜಾಬ್ ಕಾರ್ಡ್ ಮೇಳ ಅಭಿಯಾನ* : ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್ ಗದಗ ನಿರ್ದೇಶನದಂತೆ ತಾಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದಲ್ಲಿ ಹೊಸ ಜಾಬ್ ಕಾರ್ಡ್ ಮಾಡಿಸುವುದು, ತಿದ್ದುಪಡಿ, ಇಕೆವೈಸಿ ನವೀಕರಣ ಮಾಡಲಾಗುತ್ತದೆ ಎಂದು ತಿಳಿಸಿದರು.ಮಹಿಳಾ ಸಂಘಗಳು ಹಾಗೂ ಗ್ರಾಮೀಣ ಉದ್ಯೋಗಿಗಳಿಗೆ ಲಭ್ಯವಿರುವ ವಿವಿಧ ಆರ್ಥಿಕ ನೆರವು ಮತ್ತು ವೈಯಕ್ತಿಕ ಕಾಮಗಾರಿಗಳ ಬಗ್ಗೆ ಅರಿವು ಮೂಡಿಸಿದರು.ಗ್ರಾಮದ ಪ್ರತಿಯೊಬ್ಬ ಅರ್ಹ ನಾಗರಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೈಜೋಡಿಸಬೇಕಾಗಿ ವಿನಂತಿಸಿದರು .ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕ, ಪಂಚಾಯತ್ ಸಿಬ್ಬಂದಿಗಳ, ಕಾಯಕ ಬಂಧುಗಳು, ಕೂಲಿಕಾರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 