125 ದಿನಗಳ ಕೆಲಸ ಪಡೆಯಲು ಕೂಲಿಕಾರರಿಗೆ ಕರೆ

125 ದಿನಗಳ ಕೆಲಸ ಪಡೆಯಲು ಕೂಲಿಕಾರರಿಗೆ ಕರೆ  Call to laborers to avail 125 days of work


ಗಜೇಂದ್ರಗಡ, ಸೆ.3: ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಎಂಜಿಎನ್‌ಆರಿ​‍್ಜಎಸ್) 125 ದಿನಗಳ ಕೆಲಸ ಪಡೆಯಲು ಕೂಲಿಕಾರರು ನಿಯಮಿತವಾಗಿ ಕೆಲಸ ಮಾಡಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.  

ನಿಡಗುಂದಿ ಗ್ರಾಮದ ಹೊಸ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ ನಡೆದ ವಿವಿಧ ಐಇಸಿ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ನಿಗದಿಪಡಿಸಿದ ದಿನಗಳವರೆಗೆ ಕೂಲಿಕಾರರು ಕೆಲಸ ನಿರ್ವಹಿಸಿದರೆ ನಿರಂತರವಾಗಿ ಉದ್ಯೋಗ ದೊರೆಯಲಿದೆ. ವೈಯಕ್ತಿಕ ಕಾಮಗಾರಿಗಳ ಪ್ರಯೋಜನವನ್ನೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.  

ನಿಡಗುಂದಿ ಗ್ರಾಮದ ಹೊಸ ಕೆರೆ ಪುನಶ್ಚೇತನಕ್ಕಾಗಿ ಎಂಜಿಎನ್‌ಆರಿ​‍್ಜಎಸ್ ಯೋಜನೆಯಡಿ ಅಂದಾಜು ?90 ಲಕ್ಷ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕೂಲಿಕಾರರು ಸಮರ​‍್ಕವಾಗಿ ಕೆಲಸ ನಿರ್ವಹಿಸಿ ಕೆರೆಯನ್ನು ಅಭಿವೃದ್ಧಿಪಡಿಸಿದರೆ ತಾಲೂಕಿಗೆ ಮಾದರಿ ಕೆರೆಯಾಗಲಿದೆ ಎಂದರು.