ಚುನಾವಣಾ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಲು ಕರೆ

ಚುನಾವಣಾ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಲು ಕರೆ

ಬಳ್ಳಾರಿ 19: ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಮಂಗಳವಾರ ಸೆಕ್ಟರ್ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಚುನಾವಣೆಗೆ ನಿಯೋಜಿತರಾದ ಸಿಬ್ಬಂದಿಗಳ ಸಭೆ ನಡೆಯಿತು.

    ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿಗಳು ಆಗಿರುವ ಮಹಾನಗರ ಪಾಲಿಕೆ ಆಯುಕ್ತ ನಾರಾಯಣಪ್ಪ ಅವರು 09-ಬಳ್ಳಾರಿ ಲೋಕಸಭಾ ಉಪಚುನಾವಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಜರುಗಿಸುವ ನಿಟ್ಟಿನಲ್ಲಿ ಎಲ್ಲರೂ ಸಮರ್ಪಕವಾಗಿ ಕೆಲಸ ಮಾಡಬೇಕು ಎಂದರು.

    ಬಳ್ಳಾರಿ ನಗರ ವಿಧಾನಸಭಾ ಸೆಗ್ಮೆಂಟ್ ವ್ಯಾಪ್ತಿಯ ಸೆಕ್ಟರ್ ಅಧಿಕಾರಿಗಳು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ/ಸಿಬ್ಬಂದಿಗಳ ಸಭೆಯಲ್ಲಿ 245 ಮತಗಟ್ಟೆಗಳ ಮತದಾರರ ಪಟ್ಟಿಯನ್ನು ಕಾಲೋಚಿತಗೊಳಿಸುವಂತೆ ಸೂಚಿಸಿದರು. ಗೈರು, ಸ್ಥಳಾಂತರ ಮತ್ತು ಮೃತ ಹೊಂದಿದ ಮತದಾರರ ವಿವರಗಳನ್ನು ಸಂಗ್ರಹಿಸುವುದು ಮತ್ತು ಮತದಾನದ ಪ್ರಮಾಣವನ್ನು ಹೆಚ್ಚಳಕ್ಕಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಚುನಾವಣಾ ನೀತಿ ಸಂಹಿತೆ ನಿರ್ವಹಣೆ ಬಗ್ಗೆ ವಿವರವಾಗಿ ತಿಳಿಸುತ್ತಾ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿ ಇದ್ದರು.

ಸುದ್ದಿ ಓದಿ