ಒಬ್ಬ ದೇಶಭಕ್ತನನ್ನು ಭಯೋತ್ಪಾದಕ ಎಂದು ಕರೆದಿರುವುದು ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ: ವಿಶ್ವನಾಥ ಹರವಿ
ಶಿಗ್ಗಾವಿ 15 : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಒಬ್ಬ ದೇಶಭಕ್ತ, ದೇಶ ಭಕ್ತರನ್ನು ಭಯೋತ್ಪಾದಕ ಎಂದು ಹಗುರವಾಗಿ ಮಾತನಾಡಿದ್ದು ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ. ಮುಖ್ಯಮಂತ್ರಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಶಿಗ್ಗಾವಿ ತಾಲೂಕಿನ ಭಾಜಪ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗುವವರನ್ನು ನಿರಪರಾಧಿಗಳೆಂದು ಅವರ ಮೇಲಿರುವ ಕೇಸ್ ವಾಪಸ್ ಪಡೆಯುವ ಮೂಲಕ ಸ್ವಯಂ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಒಬ್ಬ ಭಯೋತ್ಪಾದಕರಾಗಿದ್ದಾರೆ ಎಂದು ಆರೋಪಿಸಿದರು ನಂತರ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಸಚಿವ ಸಂಪುಟ ನಿರ್ಧಾರದಿಂದ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಲಾಗಿದೆ. ಸಂಪುಟದ ನಿರ್ಧಾರ ನ್ಯಾಯಾಲದ ಮುಂದೆ ಹೋಗಬೇಕು. ನ್ಯಾಯಲಯ ಒಪ್ಪಿದರೆ ಮಾತ್ರ ಪ್ರಕರಣವನ್ನು ವಾಪಸ್ ಪಡೆಯಬಹುದಾಗಿದೆ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಭ್ರಷ್ಟರಿಗೆ, ದೇಶ ವಿರೋಧಿಗಳಿಗೆ, ಉಗ್ರಗಾಮಿಗಳಿಗೆ ಕುಮಕ್ಕು ನೀಡುವ ನಿಟ್ಟಿನಲ್ಲಿ ತಮ್ಮ ವೋಟ್ ಬ್ಯಾಂಕ್ ಬದ್ರ ಪಡಿಸಿಕೊಳ್ಳುವ ಸಲುವಾಗಿ ಒಂದು ಕೋಮಿನ ಮೇಲಿರುವ ಪ್ರಕರಣವನ್ನು ವಾಪಸ ಪಡೆಯಲು ಮುಂದಾಗಿರುವುದು ಖಂಡನೀಯವಾಗಿದೆ ಎಂದರು.
ತಾಲೂಕು ಮಂಡಲ ಮಾಜಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿ, ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೇಸ್ ನಾಯಕರ ಮೇಲಿರುವ ಹಗರಣ, ಆರೋಪಗಳನ್ನು ಮರೆಮಾಚಿ, ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಹೇಳಿಕೆಗಳನ್ನು ಕೊಡುವುದು ಅವರ ರಾಜಕೀಯ ತಂತ್ರಗಾರಿಕೆಯಾಗಿದೆ. ಸಿದ್ದರಾಮಯ್ಯನವರ ತಂತ್ರಗಾರಿಕೆ, ದೇಶ ವಿರೋಧಿ ಹೇಳಿಕೆಗಳನ್ನು ರಾಜ್ಯದ ಜನ ಒಪ್ಪುವುದಿಲ್ಲ ಪ್ರಹ್ಲಾದ ಜೋಶಿಯವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯವಾಗಿದೆ. 24 ಗಂಟೆ ಒಳಗಾಗಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಯುವ ಮೋರ್ಚಾ ಭಾಜಪ ಕಾರ್ಯದರ್ಶಿ ನರಹರಿ ಕಟ್ಟಿ, ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ಸುಭಾಸ ಚೌಹಾಣ, ಸದಸ್ಯತ್ವ ಅಭಿಯಾನ ಸಂಚಾಲಕ ಸೋಮಶೇಖರ ಗೌರಿಮಠ, ರೇಣಕನಗೌಡ ಪಾಟೀಲ, ಹೊನ್ನಪ್ಪ ಹೂಗಾರ, ಬಸನಗೌಡ ಮೇಲಿನಮನಿ, ಸಂತೋಷ ದೊಡ್ಡಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.