ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗ ಬೇಡಿಕೆ ಸಲ್ಲಿಕೆ ಅಭಿಯಾನ
Campaign to submit employment requests at the Gram Panchayat level
ರೋಣ, ಸೆ.15: ಗ್ರಾಮದಲ್ಲೇ ಕೆಲಸ ಸಿಗದೆ ಕೂಲಿಗಾಗಿ ದೂರದ ಊರುಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ತಪ್ಪಿಸುವ ಉದ್ದೇಶದಿಂದ ರೋಣ ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫಾರ್ಮ್ ನಂ.6 ಮೂಲಕ ಉದ್ಯೋಗ ಬೇಡಿಕೆ ಸಲ್ಲಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ವಿವಿಐ-ಜಿ ರೋಜ್ಗಾರ್ (ಜಿ) ಯೋಜನೆಯಡಿ ಉದ್ಯೋಗ ಪಡೆಯಲು ಇಚ್ಛಿಸುವ ಗ್ರಾಮೀಣ ಕುಟುಂಬಗಳು ತಮ್ಮ ಗ್ರಾಮ ಪಂಚಾಯಿತಿಗೆ ತೆರಳಿ ಫಾರ್ಮ್ ನಂ.6 ಮೂಲಕ ಕೆಲಸದ ಬೇಡಿಕೆ ಸಲ್ಲಿಸಬಹುದಾಗಿದೆ. ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಒದಗಿಸುವ ಉದ್ದೇಶದಿಂದ ಈ ಅಭಿಯಾನ ಕೈಗೊಳ್ಳಲಾಗಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗದ ಅಗತ್ಯವಿರುವ ಕುಟುಂಬಗಳು ತಪ್ಪದೇ ಅರ್ಜಿ ಸಲ್ಲಿಸುವಂತೆ ತಾಲ್ಲೂಕು ಪಂಚಾಯಿತಿಯಿಂದ ಸೂಚಿಸಲಾಗಿದೆ. ಫಾರ್ಮ್ ನಂ.6 ಮೂಲಕ ಅರ್ಜಿ ಸಲ್ಲಿಸಿದ ನಂತರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅರ್ಜಿಗಳನ್ನು ಪರೀಶೀಲಿಸಿ, ಅರ್ಹ ಕುಟುಂಬಗಳ ವಿವರಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಲಭ್ಯವಿರುವ ಕಾಮಗಾರಿಗಳ ಆಧಾರದ ಮೇಲೆ ಉದ್ಯೋಗ ನೀಡುವ ಕ್ರಮ ಕೈಗೊಳ್ಳಲಾಗುತ್ತದೆ.
ಉದ್ಯೋಗದ ಅಗತ್ಯವಿರುವವರು ಕೇವಲ ಉದ್ಯೋಗ ಚೀಟಿ ಹೊಂದಿರುವುದಷ್ಟೇ ಅಲ್ಲದೆ, ಕೆಲಸದ ಬೇಡಿಕೆಯನ್ನು ಅಧಿಕೃತವಾಗಿ ಸಲ್ಲಿಸುವುದು ಅಗತ್ಯವಾಗಿದೆ. ಈ ಹಿಂದೆ ನರೇಗಾ ಯೋಜನೆಯಡಿ ಜಾಬ್ಕಾರ್ಡ್ ಹೊಂದಿದ್ದ ಕುಟುಂಬಗಳಿಗೂ ಹೊಸ ಯೋಜನೆಯಡಿ ಉದ್ಯೋಗ ಪಡೆಯಲು ಅವಕಾಶವಿದೆ. ಹೊಸದಾಗಿ ಉದ್ಯೋಗ ಬಯಸುವ ಕುಟುಂಬಗಳೂ ನೋಂದಣಿ ಮಾಡಿಕೊಳ್ಳಬಹುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 