ಇಂಡಿ

ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ: ಕ್ರಮಕ್ಕೆ ಒತ್ತಾಯ

ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ: ಕ್ರಮಕ್ಕೆ ಒತ್ತಾಯ

ಇಂಡಿ 01: ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಿರುವಾಗ, ಕಾಂಗ್ರೆಸ್ ಪಕ್ಷದ ಮುಖಂಡರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಇಂಡಿ ಉಸ್ತುವಾರಿ ನಾಗೇಶ ಶಿವಶರಣ ಆರೋಪಿಸಿದ್ದಾರೆ. 

ಶುಕ್ರವಾರ ತಾಲೂಕಿನ ಲಚ್ಯಾಣ ಗ್ರಾಮದ ಸಿದ್ದಲಿಂಗ ಮಹಾರಾಜರ ಮಠದಲ್ಲಿ ಕಾಂಗ್ರೆಸ್ ನಾಯಕರಗಳು ಸಾರ್ವಜನಿಕ ಸ್ಥಳದಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ಸಭೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ ನಾಗಯ್ಯ ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. 

ದೇವಸ್ಥಾನ ಧಾರ್ಮಿಕ ಸ್ಥಳ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಮಾಡಬಾರದು ಎಂದು ಚುನಾವಣಾ ಆಯೋಗ ಸ್ಪಷ್ಟ ನಿರ್ದೇಶನ ನೀಡಿದ್ದರೂ ಸಹ ಕಾಂಗ್ರೆಸ್ ಮುಖಂಡರು ದೇವಸ್ಥಾನದ ಆವರಣದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸಂಬಂಧಿಸಿದ ಪಕ್ಷದ ಮುಖಂಡರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರು ಸಲ್ಲಿಸಿದ್ದಾರೆ. 


ಸುದ್ದಿ ಓದಿ