ಇಂಡಿ

ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯಿಂದ ಕ್ಯಾಂಪಸ್ ನೇಮಕಾತಿ: ಬಗಲಿ

ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯಿಂದ ಕ್ಯಾಂಪಸ್ ನೇಮಕಾತಿ: ಬಗಲಿ

ಇಂಡಿ: ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ವತಿಯಿಂದ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಕ್ಕಾಗಿ ಕ್ಯಾಂಪಸ್ ನೇಮಕಾತಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ ಹೇಳಿದರು. 

ಅವರು ಮಂಗಳವಾರ ಪಟ್ಟಣದ ಶಾಂತೇಸ್ವರ ಸಂಸ್ಥೆಯ ಆಡಳಿತ ಮಂಡಳಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. 

ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗದ ನಂತದ ಸ್ವಯಂ ಉದ್ಯೋಗ ಕೈಗೊಳ್ಳಲು ಕೌಶಲ್ಯ ಆಧರಿತ ಶಿಕ್ಷಣ ನೀಡುವ ಉದ್ದೇಶದಿಂದ “ಮುಖ್ಯಮಂತ್ರಿ ಕೌಶಲ್ಯ ತರಬೇತಿ” ಕೇಂದ್ರವನ್ನು ಸಂಸ್ಥೆಯಲ್ಲಿ ಸ್ಥಾಪಿಸಲಾಗಿದೆ ಎಂದು ವಿವರಿಸಿದರು. 

ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶ ವಿದೇಶದಲ್ಲಿ ಛಾಪು ಮೂಡಿಸಿರುವ ಐಸಿಐಸಿಐ ಬ್ಯಾಂಕ್‌ನಲ್ಲಿ ಉದ್ಯೋಗ ಅವಕಾಶಗಳನ್ನು ಸಂಸ್ಥೆಯ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ ಕ್ಯಾಂಪಸ್ ನೇಮಕಾತಿಯನ್ನು 2022-23 ನೇ ಸಾಲಿನಿಂದಲೆ ಆಯೋಜಿಸಲಾಗಿದೆ .ವಿದ್ಯಾರ್ಥಿಗಳು ಇದರ ಸದುಪಯೋಪಡಿಸಿಕೊಳ್ಳಬೇಕು ಎಂದು ಹೇಳಿದರು. 

ಐಸಿಐಸಿಐ ಬ್ಯಾಂಕ್ ತನ್ನ ಶಾಖೆಗಳನ್ನು ಸ್ಥಾಪಿಸುವ ಸಂದರ್ಭದಲ್ಲಿ ಲಕ್ಷಾಂತರ ಉದ್ಯೋಗ ಅವಕಾಶಗಳನ್ನು ನೀಡುವ ಸಾದ್ಯತೆಯಿದ್ದು ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಂತಹ ಅವಕಾಶ ದೊರೆಯಲಿ ಎಂಬ ಸದುದ್ದೇಶದಿಂದ ಬ್ಯಾಂಕಿಂಗ್ ಕ್ಷೇತ್ರದೊಂದಿಗೆ ಒಪ್ಪಂದ ಮಾಡಿಕೊಂಡು ಗ್ರಾಮೀಣ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯ ಆರಂಭಿಸಲಾಗಿದೆ. ಮುಂಬರುವ ದಿನದಲ್ಲಿ ಇನ್ನೂ ಹೆಚ್ಚಿನ ಕ್ಯಾಂಪಸ್ ನೇಮಕಾತಿಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. 

ಸಂಸ್ಥೆಯ ಉಪಾಧ್ಯಕ್ಷ ನೀಲಕಂಠಗೌಡ ಪಾಟೀಲ, ಪ್ರಾಚಾರ್ಯ ಎಸ್‌.ಬಿ. ಜಾಧವ, ರಾಘವೇಂದ್ರ ಕುಲಕರ್ಣಿ ಇದ್ದರು. 


ಸುದ್ದಿ ಓದಿ